ಕೊಪ್ಪಳದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್-ಟ್ಯಾಂಕರ್ ಢಿಕ್ಕಿಯಾಗಿ ನಾಲ್ವರ ಸಾವು
ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ಯಾಕ್ಟರ್-ಟ್ಯಾಂಕರ್ ಮುಖಾಮುಖಿ ಢಿಕ್ಕಿಯಾದ್ದರಿಂದ ಸ್ಥಳದಲ್ಲೇ ನಾಲ್ಕು ಮಂದಿ ಮೃತಪಟ್ಟು, 8 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

Published On :
ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್-ಟ್ಯಾಂಕರ್ ಮುಖಾಮುಖಿ ಢಿಕ್ಕಿಯಾದ್ದರಿಂದ ಸ್ಥಳದಲ್ಲೇ ನಾಲ್ಕು ಮಂದಿ ಮೃತಪಟ್ಟು, 8 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಕೊಪ್ಪಳದ ಕುಕನೂರಿನ ಬನ್ನಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ -63 ರಲ್ಲಿ ಟ್ರ್ಯಾಕ್ಟರ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಿಂದಾಗಿ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂತೆಯೇ 8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಮೃತರನ್ನು ಈರಪ್ಪ ಹಡಪದ (35), ಈರಮ್ಮ ಹಡಪದ (55), ಬಿಬಿಜಾನ್ ಕವಲೂರು (40) ಮಹಮದ್ ರಫಿ (19) ಎಂದು ಗುರುತಿಸಲಾಗಿದ್ದು. ಮೃತರೆಲ್ಲರೂ ಕೊಪ್ಪಳದ ಬನ್ನಿಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. ಅಪಘಾತಕ್ಕೆ ಟ್ಯಾಂಕರ್ ಚಾಲಕನ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗುತ್ತಿದ್ದು, ಪ್ರಸ್ತುತ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮುಂಜಾನೆ ಚಾಲಕ ನಿದ್ದೆಯಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದ್ದು. ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಪಘಾತKoppalಕೊಪ್ಪಳaccidentkarnataka policeಕರ್ನಾಟಕ ಪೊಲೀಸ್tanker-tractor collisionಟ್ಯಾಕ್ಟರ್-ಟ್ಯಾಂಕರ್ ಢಿಕ್ಕಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


