ರಾಜ್ಯ

4ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ, ಕ್ಯಾರೇ ಎನ್ನದ ಸರ್ಕಾರ

ವೇತನ ಹೆಚ್ಚಳ, ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಸಿ ಬಿಸಿಯೂಟ ತಯಾರಿಕಾ ಸಿಬ್ಬಂದಿಗಳು ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

4ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ, ಕ್ಯಾರೇ ಎನ್ನದ ಸರ್ಕಾರ
ಪ್ರತಿಭಟನಾ ನಿರತ ಸಿಬ್ಬಂದಿ
Published On :
ಬೆಂಗಳೂರು: ವೇತನ ಹೆಚ್ಚಳ, ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಸಿ ಬಿಸಿಯೂಟ ತಯಾರಿಕಾ ಸಿಬ್ಬಂದಿಗಳು ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧ  ಮೂಲೆಗಳಿಂದ ಸಾವಿರಾರು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಕನಿಷ್ಟ ವೇತನ ಬೇಡಿಕೆ ಈಡೇರಿಸದ ಹಿನ್ನಲೆ ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಬಳಿ ಅಹೋರಾತ್ರಿ ಧರಣಿ ಕೈಗೊಂಡಿದ್ದು, ಪ್ರತಿಭಟನೆ ಗುರುವಾರ ನಾಲ್ಕನೇ ದಿನಕ್ಕೆ  ಕಾಲಿಟ್ಟಿದೆ. ಮುಷ್ಕರ ಆರಂಭವಾಗಿ ನಾಲ್ಕು ದಿನಗಳೇ ಕಳೆದರೂ ರಾಜ್ಯ ಸರ್ಕಾರ ಮಾತ್ರ ಇನ್ನೂ ಈ ಬಗ್ಗೆ ಗಮನ ಹರಿಸಿಲ್ಲ. ಇದರಿಂದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಸಿಯೂಟ ತಯಾರಿಕರ ಸಿಬ್ಬಂದಿಗಳ  ಒಕ್ಕೂಟ ಇಂದು ರಾಜ್ಯಾದ್ಯಂತ ಬಿಸಿಯೂಟ ತಯಾರಿಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ದಿನಗಳಿಂದ ಬಿಸಿಯೂಟ ತಯಾರಿಕಾ ಸಿಬ್ಬಂದಿ ಹಗಲು ರಾತ್ರಿ ಎನ್ನದೇ ಮೈಕೊರೆಯುವ  ಚಳಿಯಲ್ಲೂ ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದು, ಆದರೂ ರಾಜ್ಯ ಸರ್ಕಾರ ಮಾತ್ರ ಈ ಬಗ್ಗೆ ಗಮನ ಹರಿಸುತ್ತಿಲ್ಲ.
ಈ ಹಿಂದೆ ಸಚಿವ ತನ್ವೀರ್ ಸೇಠ್ ಅವರು ಬಂದು ಕಾರ್ಯಕರ್ತರ ಬೇಡಿಕೆ ಈಡೇರಿಸುವ ಕುರಿತು ಆಶ್ವಾಸನೆ ನೀಡಿದ್ದರಾದರೂ, ಬಳಿಕ ಅವರಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಪ್ರತಿಭಟನೆಯನ್ನು ತೀವ್ರ  ಗೊಳಿಸಸುವುದಾಗಿ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. 
ಏತನ್ಮಧ್ಯೆ ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ಮಹಿಳೆಯರಕು ಮತ್ತು ಅವರ ಮಕ್ಕಳು ರಾತ್ರಿ ಇಡೀ ಪ್ರತಿಭಟನೆ ನಡೆಸಿದ್ದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ಅತ್ತ ಮಹಿಳೆಯರಿಗೆ ಎಮ್​ ಇ ಪಿ ಪಕ್ಷದ  ಕಾರ್ಯಕರ್ತರು 50 ಕ್ಕೂ ಹೆಚ್ಚು ಬೆಡ್​ ಶೀಟ್​ ವಿತರಿಸಿದ್ದಾರೆ. 
ಈ ಮಧ್ಯೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಾರ್ಯಕರ್ತರು, ಈ ಹಿಂದೆ ಸರ್ಕಾರ ಕನಿಷ್ಟ ವೇತನವನ್ನು 5.200 ರೂಗೆ ಏರಿಕೆ ಮಾಡುವುದಾಗಿ ಆಶ್ವಾಸನೆ ನೀಡಿತ್ತು. ಇದಾಗ್ಯೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಇದೀಗ ನಮ್ಮ  ಸಹನೆಯ ಕಟ್ಟೆ ಒಡೆದಿದ್ದು, ಕನಿಷ್ಠ ವೇತನ ಹತ್ತು ಸಾವಿರ ಮಾಡುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.