ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಸರಿಸಮನಾದ ವ್ಯಕ್ತಿ: ನಿರಂಜನಾನಂದ ಪುರಿ ಸ್ವಾಮೀಜಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಮಾನಾಗಿರುವ ವ್ಯಕ್ತಿ ಎಂದು ಕಾಗಿನೆಲೆ ಕನಕಪೀಠದ....

Published On :
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಮಾನಾಗಿರುವ ವ್ಯಕ್ತಿ ಎಂದು ಕಾಗಿನೆಲೆ ಕನಕಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬೆಳ್ಳೂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಪ್ರಧಾನಿ ಮೋದಿ ಸರಿಸಮಾನವಾದ ವ್ಯಕ್ತಿ ಯಾರದರೂ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಎಂದರು. ಅಲ್ಲದೆ ನಮ್ಮ ಹಾಲುಮತ ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇರಬೇಕು ಆಗ ಸಿದ್ದರಾಮಯ್ಯ ಅವರು ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಇಂದು ಬೆಳ್ಳೂಡಿಯಲ್ಲಿ ಹಮ್ಮಿಕೊಂಡಿರುವ ಕನಕ ಗುರುಪೀಠದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸಹ ಭಾಗವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


