ಬೆಂಗಳೂರು: ಭಯೋತ್ಪಾದಕ ಕೃತ್ಯಕ್ಕೆ ಹಣ ವರ್ಗಾವಣೆ, ಲಷ್ಕರ್ ಉಗ್ರನಿಗೆ ಏಳು ವರ್ಷ ಸಜೆ
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಇ-ತೊಯ್ಬಾ (ಎಲ್ ಇಟಿ) ಗೆ ಸೇರಿದ ಭಯೋತ್ಪಾದಕನಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯವು ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

Published On :
ಬೆಂಗಳೂರು: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಇ-ತೊಯ್ಬಾ (ಎಲ್ ಇಟಿ) ಗೆ ಸೇರಿದ ಭಯೋತ್ಪಾದಕನಿಗೆ ಬೆಂಗಳೂರಿನ ಸ್ಥಳೀಯ ನ್ಯಾಯಾಲಯವು ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಭಯೋತ್ಪಾದಕ ಚಟುವಟಿಕೆ ನಡೆಸುವುದು ಹಾಗೂ ಭಯೋತ್ಪಾದಕ ಕೃತ್ಯಕ್ಕೆ ಹಣ ವರ್ಗಾವಣೆ ಆರೋಪ ಸಂಬಂಧ ಈ ಶಿಕ್ಷೆ ಪ್ರಕಟವಾಗಿದೆ.
ಕರ್ನಾಟಕದಲ್ಲಿದ್ದುಕೊಂಡೇ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ್ದ ನಡೆಸುತ್ತಿದ್ದ ಬಿಲಾಲ್ ಅಹಮದ್ ಖುತಾ ಅಲಿಯಾಸ್ ಇಮ್ರಾನ್ ಜಲಾಲ್ ಗೆ ಜೈಲು ಶಿಕ್ಷೆ ಜತೆಗೆ 50,000 ರೂ. ದಂಡ ವಿಧಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ ಎ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಶಂಕರ್ ಅಮರಣ್ಣವರ್ ಅವರಿದ್ದ ಏಕವ್ಯಕ್ತಿ ಪೀಠವು ಈ ತೀರ್ಪು ಪ್ರಕಟಿಸಿದೆ.
ಜನವರಿ 2007ರಲ್ಲಿ ಕರ್ನಾಟಕ ಪೋಲೀಸರು ಎಕೆ ಸರಣಿ ರೈಫಲ್ಸ್, 200 ಗುಂಡುಗಳು, ಐದು ಹ್ಯಾಂಡ್ ಗ್ರೆನೇಡ್ ಗಳು ಹಾಗೂ ಸ್ಯಾಟಲೈಟ್ ಫೋನ್ ಹೊಂದಿದ್ದ ಓರ್ವ ಉಗ್ರನನ್ನ ಬಂಧಿಸಿದ್ದರು. ಅಂದು ಆತನ ವಿರುದ್ಧ ಭಾರತ ಸರಕಾರ ವಿರುದ್ಧ ಸಮರ, , ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳನ್ನು ಹೊಂದಿರುವುದು ಸೇರಿದಂತೆ ಭಾರತೀಯ ದಂಡ ಸಂಹಿತೆಯ ಇತರ ವಿಭಾಗಗಳಡಿಯಲ್ಲಿ ಪ್ರಕರಣ ದಾಕಲಿಸಲಾಗಿತ್ತು. ಎಲ್ ಇಟಿ ಸದಸ್ಯನಾಗಿದ್ದ ಆರೋಪಿ ಬಿಲಾಲ್ 2001ರಿಂದಲೂ ಇಂತಹಾ ಸಮಾಜ ವಿದ್ರೋಹ ಕೆಲಸದಲ್ಲಿ ತೊಡಗಿದ್ದ ಎಂದು ಪೋಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನLashkar-e-Taibaಲಷ್ಕರ್-ಇ-ತೊಯ್ಬಾBilal Ahmed QutaSpecial PMLA courtಬಿಲಾಲ್ ಅಹಮದ್ ಖತಾವಿಶೇಷ ಪಿಎಂಎಲ್ಎ ನ್ಯಾಯಾಲಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


