ರಾಜ್ಯ

ನೋ ಹೆಲ್ಮೆಟ್, ನೋ ಪೆಟ್ರೋಲ್: ಹೊಸ ನಿಯಮ ಜಾರಿಗೆ ಮುಂದಾದ ಹುಬ್ಬಳ್ಳಿ-ಧಾರವಾಡ ಪೊಲೀಸರು

ರಾಜ್ಯ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ್ದರೂ, ನಿಯಮ ಉಲ್ಲಂಘಿಸಿದ ಹೆಲ್ಮೆಟ್ ಧರಿಸದೆ ಸಂಭವಿಸುತ್ತಿರುವ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು...

ನೋ ಹೆಲ್ಮೆಟ್, ನೋ ಪೆಟ್ರೋಲ್: ಹೊಸ ನಿಯಮ ಜಾರಿಗೆ ಮುಂದಾದ ಹುಬ್ಬಳ್ಳಿ-ಧಾರವಾಡ ಪೊಲೀಸರು
ಸಂಗ್ರಹ ಚಿತ್ರ
Published On :
ಧಾರವಾಡ: ರಾಜ್ಯ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ್ದರೂ, ನಿಯಮ ಉಲ್ಲಂಘಿಸಿದ ಹೆಲ್ಮೆಟ್ ಧರಿಸದೆ ಸಂಭವಿಸುತ್ತಿರುವ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಹೊಸ ನಿಯಮವೊಂದರನ್ನು ಜಾರಿಗೊಳಿಸಲು ಮುಂದಾಗಿದ್ದಾರೆ. 
ಈಗಾಗಲೇ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿರುವ ಪೊಲೀಸರು ಇದೀಗ ಹೆಲ್ಮೆಟ್ ಧರಿಸಿದ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಸಿಗದಂತೆ ಮಾಡಲು ಹೊಸ ನಿಯಮವೊಂದನ್ನು ಜಾರಿಗೊಳಿಸಲು ಮುಂದಾಗಿದ್ದಾರೆ. 
ವಾಹನ ಸವಾರರು ಹೆಲ್ಮೆಟ್ ಧರಿಸದೇ ಇದ್ದರೆ, ಪೆಟ್ರೋಲ್ ನೀಡದಂತೆ ಪೆಟ್ರೋಲ್ ಬಂಕ್ ಗಳಿಗೆ ಪೊಲೀಸರು ಸೂಚಿಸಿದ್ದಾರೆ. ಈ ಹೊಸ ನಿಯಮ ಮಾರ್ಚ್.1 ರಿಂದ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ. 
ನೋ ಹೆಲ್ಮೆಟ್- ನೋ ಪೆಟ್ರೋಲ್ ನಿಯಮ ಜಾರಿಗೆ ಬಂದ ಬಳಿಕ ಸಿಸಿಟಿವಿ ಮೂಲಕ ಪೊಲೀಸರು ಪೆಟ್ರೋಲ್ ಬಂಕ್ ಗಳ ಮೇಲೆ ಕಣ್ಗಾವಲಿರಿಸಲಿದ್ದಾರೆ. ಆಗಾಗಲೇ ಪೆಟ್ರೋಲ್ ಬಂಕ್ ಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಲಿದ್ದಾರೆ. 
ಹೆಲ್ಮೆಟ್ ಕಡ್ಡಾಯಗೊಳಿಸಿರುವ ನಿಯಮ ಯಶಸ್ವಿಯಾಗಿದೆ. ಹೆಲ್ಮೆಟ್ ಧರಿಸಿದೇ ವಾಹನ ಚಾಲನೆ ಮಾಡಿ ಸಾಕಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಜಾಗೃತಿ ಎಂಬುದು ಸುಧೀರ್ಘ ಪ್ರಕ್ರಿಯೆಯಾಗಿದೆ. ಹೀಗಾಗಿ ನಾವು ಹೊಸ ಹೊಸ ತಂತ್ರಗಳನ್ನು ರೂಪಿಸಬೇಕಿದ್ದು, ದ್ವಿಚಕ್ರ ವಾಹನ ಸವಾರರು ಆ ನಿಯಮಗಳಿಗೆ ಬದ್ಧರಾಗಿರಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ. 
ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಬಿ.ಎಸ್. ನೆಮಗೌಡ್ ಮಾತನಾಡಿ, ಹೊಸ ನಿಯಮ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಶೀಘ್ರದಲ್ಲಿಯೇ ನಿಯಮವನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.