ರಾಜ್ಯ

ಬೆಳಗಾವಿ: 20 ವಿದ್ಯಾರ್ಥಿಗಳ ತಲೆಕೂದಲು ಕತ್ತರಿಸಿದ ಮುಖ್ಯಶಿಕ್ಷಕಿ

ಮುಖ್ಯ ಶಿಕ್ಷಕಿಯೊಬ್ಬರು ಶಾಲೆಯ 20 ವಿದ್ಯಾರ್ಥಿಗಳ ಕೂದಲು ಕತ್ತರಿಸಿರುವ ಘಟನೆ ಬೆಳಗಾವಿಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ....

ಬೆಳಗಾವಿ: 20 ವಿದ್ಯಾರ್ಥಿಗಳ ತಲೆಕೂದಲು ಕತ್ತರಿಸಿದ ಮುಖ್ಯಶಿಕ್ಷಕಿ
ತಲೆ ಕೂದಲು ಕತ್ತರಿಸಿಕೊಂಡ ವಿದ್ಯಾರ್ಥಿ
Published On :
ಬೆಳಗಾವಿ: ಮುಖ್ಯ ಶಿಕ್ಷಕಿಯೊಬ್ಬರು ಶಾಲೆಯ 20 ವಿದ್ಯಾರ್ಥಿಗಳ  ಕೂದಲು ಕತ್ತರಿಸಿರುವ ಘಟನೆ ಬೆಳಗಾವಿಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ.
ಕಾಕತಿಯ ಸೆಂಟ್ ಜಾನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ 20 ವಿದ್ಯಾರ್ಥಿಗಳ ತಲೆ ಕೂದಲು ಕತ್ತರಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಸಂಬಂಧ ಬೆಳಗಾವಿ ಡಿಡಿಪಿಐ ಶಾಲಾ ಆಡಳಿತ ಮಂಡಳಿಗೆ ನೋಟೀಸ್ ನೀಡಿದ್ದು, ವರದಿ ಸಲ್ಲಿಸುವಂತೆ ತಿಳಿಸಿದೆ.
ಇನ್ನೂ ಈ ಸಂಬಂಧ ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ಧ ತಿರುಗಿ ಬಿದ್ದಿದ್ದು, ಶಿಕ್ಷಕರ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಆದರೆ ಮಖ್ಯಶಿಕ್ಷಕಿಯ ಕ್ರಮವನ್ನು  ಶಾಲಾ ಆಡಳಿತ ಮಂಡಳಿ ಸಮರ್ಥಿಸಿಕೊಂಡಿದೆ. ವಿದ್ಯಾರ್ಥಿಗಳು ಸರಿಯಾಗಿ ಕಲೆಕೂದಲು ಕತ್ತರಿಸಿರಲಿಲ್ಲ, ಇದರಿಂದ ಶಿಸ್ತು ಇರುವುದಿಲ್ಲ ಎಂಬ ಕಾರಣಕ್ಕೆ ಈ ಶಿಕ್ಷೆ ನೀಡಲಾಗಿದೆ ಎಂದು ಎ,.ಬಿ ಪುಂಡಲೀಕ್ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆ ಹೊರತು ಶಿಕ್ಷೆ ನೀಡಬಾರದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.