ಪಾಲಿಕೆ ಸದಸ್ಯೆ ರೇಖಾ ಪತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಶರಣು
ಛಲವಾದಿಪಾಳ್ಯ ವಾರ್ಡ್‌ನ ಬಿಜೆಪಿ ಪಾಲಿಕೆ ಸದಸ್ಯೆ ರೇಖಾ ಅವರ ಪತಿ ಎಸ್. ಕದಿರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನವೀನ್ ಹಾಗೂ ಆತನ ...

Published On :
ಬೆಂಗಳೂರು: ಛಲವಾದಿಪಾಳ್ಯ ವಾರ್ಡ್‌ನ ಬಿಜೆಪಿ ಪಾಲಿಕೆ ಸದಸ್ಯೆ ರೇಖಾ ಅವರ ಪತಿ ಎಸ್. ಕದಿರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನವೀನ್ ಹಾಗೂ ಆತನ ತಮ್ಮ ವಿನಯ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಆಂಜನಪ್ಪ ಗಾರ್ಡನ್ ಮುನೀಶ್ವರ ದೇವಸ್ಥಾನದ ಆವರಣದಲ್ಲೇ ಫೆ. 7ರಂದು ಕದಿರೇಶ್ ಕೊಲೆ ನಡೆದಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರು, ತಿರುಪತಿಗೆ ಹೋಗಿ ತಲೆ ಬೋಳಿಸಿಕೊಂಡಿದ್ದರು. ಅಲ್ಲಿಂದಲೇ ನಗರಕ್ಕೆ ಬಂದಿದ್ದ ಅವರು ವಕೀಲರ ಜತೆಗೆ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾದರು.
ಪೊಲೀಸರು ಗುಂಡು ಹಾರಿಸಿ ತಮ್ಮನ್ನು ಬಂಧಿಸಬಹುದು ಭಾವಿಸಿದ್ದ ಆರೋಪಿಗಳ, ವಕೀಲರ ರೀತಿಯಲ್ಲೇ ಸೂಟ್ ಧರಿಸಿ ನ್ಯಾಯಾಲಯ ಪ್ರವೇಶಿಸಿದ್ದರು. ನಂತರ ನ್ಯಾಯಾಧೀಶರ ಮುಂದೆ ಶರಣಾದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅವರು ಎಂಬುದು ಆರಂಭದಲ್ಲಿ ಯಾರಿಗೂ ಗೊತ್ತಿರಲಿಲ್ಲ. ಅವರ ಪರ ವಕೀಲರು ನ್ಯಾಯಾಲಯದೊಳಗೆ ಹೋದ ನಂತರವೇ ಕೈ ಮುಗಿದುಕೊಂಡು ಆರೋಪಿಗಳು ಒಳಗೆ ಬಂದರು. ಪೊಲೀಸರ ಭಯವಿರುವುದರಿಂದ ಈ ವೇಷದಲ್ಲಿ ಬಂದಿರುವುದಾಗಿ ಅವರು ನ್ಯಾಯಾಲಯಕ್ಕೆ ಹೇಳಿದರು’
ಆರೋಪಿಗಳ ವಿರುದ್ಧ ಗಂಭೀರ ಆರೋಪ ಇದೆ. ಕೊಲೆ ನಡೆದ ದಿನದಿಂದಲೇ ಆರೋಪಿಗಳಿಗಾಗಿ ನಾಲ್ಕು ತಂಡಗಳು ನಿರಂತರವಾಗಿ ಶೋಧ ನಡೆಸುತ್ತಿತ್ತು. ವಿಚಾರಣೆಗಾಗಿ ಅವರಿಬ್ಬರನ್ನು 15 ದಿನ ಕಸ್ಟಡಿಗೆ ನೀಡಬೇಕು’ ಎಂದು ಪೊಲೀಸರು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿಗಳನ್ನು 10 ದಿನಗಳವರೆಗೆ ಪೊಲೀಸರ ಕಸ್ಟಡಿಗೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


