ರಾಜ್ಯ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ; ದ್ವಿಚಕ್ರ ವಾಹನ ಸವಾರ ಸಾವು

ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ದ್ವಿಚಕ್ರ ವಾಹನ ಸವಾರನ ಮೇಲೆ ಚಕ್ರ ಹರಿದು ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಶಿರಶಿ ವೃತ್ತದ ಬಳಿ ಮಂಗಳವಾರ ನಡೆದಿದೆ...

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ; ದ್ವಿಚಕ್ರ ವಾಹನ ಸವಾರ ಸಾವು
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ- ದ್ವಿಚಕ್ರ ವಾಹನ ಸವಾರ ಸಾವು
Published On :
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ದ್ವಿಚಕ್ರ ವಾಹನ ಸವಾರನ ಮೇಲೆ ಚಕ್ರ ಹರಿದು ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಶಿರಶಿ ವೃತ್ತದ ಬಳಿ ಮಂಗಳವಾರ ನಡೆದಿದೆ. 
ವಿಜಯನಗರದ ಪೈಪ್ ಲೈನ್ ರಸ್ತೆಯ ನಿವಾಸಿ ಮೊಹಮ್ಮದ್ ಫಾರೂಖ್ (31) ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ. ಘಟನೆಯಲ್ಲಿ ಫಾರೂಖ್ ಪತ್ನಿ ಬುಶ್ರಾ (28) ಅವರಿಗೂ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. 
ಖಾಸಗಿ ಮೆಡಿಕಲ್ ಲ್ಯಾಬ್ ವೊಂದರಲ್ಲಿ ಫಾರೂಕ್ ಅವರು ಕಳೆದ 8 ವರ್ಷಗಳಿಂದ ಲ್ಯಾಬ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದರು. ಫಾರೂಕ್ ಅವರ ಪತ್ನಿ ಕೂಡ ಇದೇ ಲ್ಯಾಬ್ ನಲ್ಲಿಯೇ ಕೆಲಸ ಮಾಡುತ್ತಿದ್ದರು. 
ನಿನ್ನೆ ಬೆಳಿಗ್ಗೆ 9.30ರ ಸುಮಾರಿಗೆ ಫಾರೂಕ್ ಅವರು ತಮ್ಮ ಪತ್ನಿಯೊಂದಿಗೆ ಕೆಲಸಕ್ಕೆ ತೆರಳುತ್ತಿದ್ದರು. ಮೈಸೂರು ರಸ್ತೆಯ ಅಗ್ನಿಶಾಮಕ ಠಾಣೆ ಎದುರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ, ಇದೇ ಮಾರ್ಗದಲ್ಲಿ ಪೀಣ್ಯ ಕಡೆಯಿಂದ ಕೆ.ಆರ್.ಮಾರುಕಟ್ಟೆ ಕಡೆ ಬರುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ನಿಯಂತ್ರಣ ತಪ್ಪಿ ಬಲಭಾಗಕ್ಕೆ ಫಾರೂಕ್ ಅವರು ಬಿದ್ದಿದ್ದಾರೆ. ಈ ವೇಳೆ ಬಸ್ ಫಾರೂಕ್ ಅವರ ತಲೆಯ ಮೇಲೆ ಹರಿದಿದೆ. ಪರಿಣಾಮ ಫಾರೂಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 
ಎಡಭಾಗಕ್ಕೆ ಬುಶ್ರಾ ಅವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಕೂಡಲೇ ಸ್ಥಳಕ್ಕೆ ಆಗಮಿಸಿದ ಚಿಕ್ಕಪೇಟೆ ಸಂಚಾರಿ ಪೊಲೀಸರು ಬಸ್ಸನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಂಪತಿಗಳಿಬ್ಬರೂ ಹೆಲ್ಮೆಟ್ ಧರಿಸಿದ್ದರು. ಪ್ರಕರಣ ಸಂಬಂಧ ಬಸ್ ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಎಂದಿನಂತೆ ದಂಪತಿಗಳಿಬ್ಬರೂ ಬೆಳಿಗ್ಗೆ 8.45ಕ್ಕೆ ಮನೆ ಬಿಟ್ಟಿದ್ದರು. ಫಾರೂಖ್ ಅತ್ಯಂತ ಜಾಗರೂಕತೆಯಿಂದ ವಾಹನವನ್ನು ಚಾಲನೆ ಮಾಡುತ್ತಿದ್ದ. ಫಾರೂಖ್ ಹಾಗೂ ಬುಶ್ರಾ ಇಬ್ಬರು ಒಟ್ಟಿಗೆ ಕೆಲಸಕ್ಕೆ ಹೋಗುತ್ತಿದ್ದರು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.