ರಾಜ್ಯ

ಆಟವಾಡುತ್ತಿದ್ದ ಅಪ್ರಾಪ್ತ ಬಾಲಕರಿಬ್ಬರ ಮೇಲೆ ಆ್ಯಸಿಡ್ ದಾಳಿ

ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕ ಮೇಲೆ ದುಷ್ಕರ್ಮಿಗಳ ತಂಡವೊಂದು ಆ್ಯಸಿಡ್ ಎರಚಿ ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಕೆ.ಆರ್. ಬಡಾವಣೆಯಲ್ಲಿ ಮಂಗಳವಾರ ನಡೆದಿದೆ...

ಆಟವಾಡುತ್ತಿದ್ದ ಅಪ್ರಾಪ್ತ ಬಾಲಕರಿಬ್ಬರ ಮೇಲೆ ಆ್ಯಸಿಡ್ ದಾಳಿ
ಸಾಂದರ್ಭಿಕ ಚಿತ್ರ
Published On :
ತುಮಕೂರು; ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕ ಮೇಲೆ ದುಷ್ಕರ್ಮಿಗಳ ತಂಡವೊಂದು ಆ್ಯಸಿಡ್ ಎರಚಿ ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಕೆ.ಆರ್. ಬಡಾವಣೆಯಲ್ಲಿ ಮಂಗಳವಾರ ನಡೆದಿದೆ. 
ಆನಂದ್ ಎಂಬುವವರ ಪುತ್ರರಾದ ದರ್ಶನ್ (11) ಮತ್ತು ಆತನ ಸಹೋದರ ವಿನಯ್ (4) ದಾಳಿಗೆ ತುತ್ತಾದ ಬಾಲಕರಾಗಿದ್ದಾರೆ. 
ಇಬ್ಬರಿಗೂ ಮುಖ ಮತ್ತು ದೇಹದ ಮತ್ತಿತರೆ ಭಾಗಗಳಲ್ಲಿ ಸುಟ್ಟ ಗಾಯಗಳಾಗಿದ್ದು, ನಗರದ ಸಾರ್ವಜನಿಕ ಆಸ್ಪತ್ರೆದೆ ದಾಖಲಿಸಿ, ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ತಿಳಿಬುದಂದಿದೆ. 
ಬಡಾವಣೆಯ ಹತ್ತಿರದಲ್ಲಿರುವ ಉದ್ಯಾನವನದಲ್ಲಿ ಕಳೆದ ವಾರ ಗಾಯಾಳು ಬಾಲಕು ಹಾಗೂ ಮತ್ತಿಬ್ಬರು ಮಕ್ಕಳ ನಡುವೆ ಆಟವಾಡುವ ವೇಲೆ ಮಾತಿನ ಚಕಮಕಿ ನಡೆದಿತ್ತು. ಈ ಹಿನ್ನಲೆಯಲ್ಲಿ ಆ್ಯಸಿಡ್ ದಾಳಿ ನಡೆದಿರಬಹುದು ಎಂಬ ಮಾತುಗಳು ಕೇಳಿ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.