ಬೆಂಗಳೂರು: ಮೆಡಿಕಲ್, ಇಂಜಿನಿಯರಿಂಗ್ ಪಿಜಿ ಸೀಟು ದಂಧೆ; ಇಬ್ಬರ ಬಂಧನ
ಪ್ರತಿಷ್ಠಿತ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಪಿಜಿ ಸೀಟು ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರುಪಾಯಿ ವಂಚನೆ ಮಾಡಿದ್ದ ಇಬ್ಬರನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ...
Published On :
ಬೆಂಗಳೂರು: ಪ್ರತಿಷ್ಠಿತ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಪಿಜಿ ಸೀಟು ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರುಪಾಯಿ ವಂಚನೆ ಮಾಡಿದ್ದ ಇಬ್ಬರನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರಜತ್ ಶೆಟ್ಟಿ ಹಾಗೂ ಜಯಪ್ರಕಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅವರಿಂದ 32 ಲಕ್ಷ ರುಪಾಯಿ ನಗದು ಮತ್ತು 50 ಲಕ್ಷ ರುಪಾಯಿ ಫಿಕ್ಸೆಡ್ ಡಿಪಾಸಿಟ್ ದಾಖಲೆಯನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ಬಂಧಿತರಿಂದ 1.03 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆಡಿದ್ದಾರೆ.
ರಜತ್ ಶೆಟ್ಟಿ ಮತ್ತು ಜಯಪ್ರಕಾಶ್ ಶೆಟ್ಟಿ ಅವರು ಬಿಟಿಎಂ ಲೇಔಟ್ ನಲ್ಲಿ ಗ್ಲೋಬಲ್ ಲರ್ನಿಂಗ್ ಅಂಡ್ ಎಜುಕೇಷನ್ ಕನ್ಸ್ಲ್ಟೆನ್ಸಿ ಕಚೇರಿ ತೆರೆದಿದ್ದರು. ಇದೇ ರೀತಿ ನಗರದ ವಿವಿಧೆಡೆ ಜೆಪಿ ಕನ್ಸ್ಲ್ಟೆನ್ಸಿ, ಎಜೆಎ ಇನ್ಫ್ರಾಸ್ಟ್ರಕ್ಚರ್, ನಾರಾಯಣ ಕನ್ಸ್ಲ್ಟೆನ್ಸಿ ಹಾಗೂ ಐಆರ್ಎಸ್ ಕನ್ಸ್ಲ್ಟೆನ್ಸಿ ಹೆಸರಿನಲ್ಲಿ ಕಚೇರಿ ತೆರೆದಿದ್ದರು.
ಆರೋಪಿಗಳು ವಂಚನೆಯಿಂದ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು. ವಿದೇಶ ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗುತ್ತಿದ್ದರು. ಜತೆಗೆ ಇವರು ಫ್ಲ್ಯಾಟ್ ಖರೀದಿಸಿದ್ದರು. ವಿವಿಧ ಕಂಪನಿಗಳಲ್ಲಿ 12.5 ಲಕ್ಷ ರುಪಾಯಿ ಹಣವನ್ನು ಷೇರುಗಳಲ್ಲಿ ಹೂಡಿಕೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ.
ಬಂಧಿತರ ವಿರುದ್ಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

