ಬಹುಮನಿ ಉತ್ಸವ ಆಚರಣೆ ವಿಚಾರ ನನಗೆ ಗೊತ್ತೇ ಇಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ
ಬಹುಮನಿ ಉತ್ಸವ ಆಚರಣೆ ವಿಚಾರ ನನಗೆ ಗೊತ್ತೇ ಇಲ್ಲ. ಸರ್ಕಾರದಿಂದ ಉತ್ಸವ ಆಚರಣೆ ಮಾಡುವ ತೀರ್ಮಾ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ...

Published On :
ಬೆಂಗಳೂರು: ಬಹುಮನಿ ಉತ್ಸವ ಆಚರಣೆ ವಿಚಾರ ನನಗೆ ಗೊತ್ತೇ ಇಲ್ಲ. ಸರ್ಕಾರದಿಂದ ಉತ್ಸವ ಆಚರಣೆ ಮಾಡುವ ತೀರ್ಮಾ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಹೈದರಾಬಾದ್ ಕರ್ನಾಟಕವನ್ನಾಳಿದ್ದ ಪ್ರಬಲ ರಾಜಮನೆತನದ ಬಹುಮನಿ ಸುಲ್ತಾನರ ಹೆಸರಲ್ಲಿ ಕಲಬುರಗಿಯಲ್ಲಿ ಸರ್ಕಾರ ಒಂದು ದಿನದ ಉತ್ಸವ ಆಚರಿಸಲು ಚಿಂತನೆ ನಡೆಸಿದ್ದು, ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಹಿನ್ನಲೆಯಲ್ಲಿ ನಿನ್ನೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಹುಮನಿ ಉತ್ಸವ ಆಚರಣೆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ಸರ್ಕಾರದಿಂದ ಉತ್ಸವ ಆಚಱಣೆ ಮಾಡುವ ತೀರ್ಮಾನವನ್ನು ಕೈಗೊಂಡಿಲ್ಲ. ಬಹುಮನಿ ಉತ್ಸವಕ್ಕೆ ಅನುದಾನ ನೀಡಿದ್ದೇವೆಂಬುದು ಸುಳ್ಳು. ರಾಷ್ಟ್ರಕೂಟ ಉತ್ಸವಕ್ಕೆ ಮಾತ್ರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರೂ.30 ಲಕ್ಷ ಅನುದಾನ ನೀಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯKarnatakaಕರ್ನಾಟಕಕಲಬುರಗಿkalaburagiBahmani Sultanate utsavaಬಹುಮನಿ ಸುಲ್ತಾನ್ ಉತ್ಸವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


