ಬೆಂಗಳೂರು: ಶಾಸಕ ಹ್ಯಾರೀಸ್ ಪುತ್ರನ ವಿರುದ್ಧ ಹಲ್ಲೆ ಆರೋಪ, ಎಫ್ಐಆರ್ ದಾಖಲು
ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮದ್ ಹ್ಯಾರಿಸ್ ನಳಪದ ಮತ್ತು ಇತರ ಹತ್ತು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Published On :
ಬೆಂಗಳೂರು: ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮದ್ ಹ್ಯಾರಿಸ್ ನಲಪಾಡ್ ಮತ್ತು ಇತರ ಹತ್ತು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ರೆಸಾರ್ಟ್ ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಈ ಎಫ್ಐಆರ್ ದಾಖಲಾಗಿದೆ.
ಹ್ಯಾರೀಸ್ ಪುತ್ರನಿಂದ ಹಲ್ಲೆಗೊಳಗಾದವರನ್ನು ವಿದ್ವತ್ ಎಂದು ಗುರುತಿಸಲಾಗಿದೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ವೇಳೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು "ಅಪರಾಧಿಗಳು ಯಾರೇ ಆದರೂ ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು' ಎಂದಿದ್ದಾರೆ.
ಮಹಮದ್ ನಲಪಾಡ್ ಅವರು ಕಾಂಗ್ರೆಸ್ ಶಾಸಕರಾದ ಎನ್ಎ ಹ್ಯಾರಿಸ್ ಅವರ ಪುತ್ರರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯCongress MLAಕಾಂಗ್ರೆಸ್ ಶಾಸಕUB cityಯುಬಿ ಸಿಟಿMohammed Haris NalapadNA Harrisಮಹಮದ್ ಹ್ಯಾರೀಸ್ ನಲಪಾಡ್ಎನ್ಎ ಹ್ಯಾರೀಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


