ರಾಜ್ಯ

ಬೆಳಗಾವಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರ ಸಾವು

ಸಂಬಂಧಿಕರ ಅಂತ್ಯಕ್ರಿಯೆಗೆಂದು ತೆರಳುವ ವೇಳೆ ಭೀಕರ ಅಪಘಾತದಿಂಡಾದಿ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮದ ಸಮೀಪ ನಡೆದಿದೆ.

ಬೆಳಗಾವಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ  ಐವರ ಸಾವು
ಬೆಳಗಾವಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರ ಸಾವು
Published On :
ಬೆಳಗಾವಿ: ಸಂಬಂಧಿಕರ ಅಂತ್ಯಕ್ರಿಯೆಗೆಂದು ತೆರಳುವ ವೇಳೆ ಭೀಕರ ಅಪಘಾತದಿಂಡಾದಿ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ  ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮದ ಸಮೀಪ ನಡೆದಿದೆ.
ಅಡಹಳ್ಳಿ ಗ್ರಾಮದ ಹೊರವಲಯದ ಅಥಣಿ – ಗುಡ್ಡಾಪೂರ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು ಕ್ರೂಸರ್‌ ಮತ್ತು ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಢಿಕ್ಕಿಯಾಗಿದೆ.  ಮೃತರನ್ನು ಅಣ್ಣಪ್ಪ ಜಾಧವ್(40), ಅರ್ಚನಾ ಜಾಧವ್(35), ರಾಧಮ್ಮ ಜಾಧವ್(55), ರವಿ ಜಾಧವ್(12) ಮತ್ತು ಗೌರವ್ವ ಜಾಧವ್(75) ಎಂದು ಗುರುತಿಸಲಾಗಿದ್ದು ಇವರೆಲ್ಲರೂ ಅಥಣಿ ತಾಲೂಕಿನ ಕಕಮರಿ ಮೂಲದವರು ಎನ್ನಲಾಗಿದೆ.
ಸಂಬಂಧಿಕರೊಬ್ಬರ ಅಂತ್ಯ ಸಂಸ್ಕಾರಕ್ಕೆ ಕಮರಿ ಗ್ರಾಮದಿಂದ ಅವರಕೋಡ ಗ್ರಾಮಕ್ಕೆ ತೆರಳುತ್ತಿದ್ದರು. ಒಟ್ಟು 16 ಮಂದಿ ಕ್ರೂಸರ್ ನಲ್ಲಿ ತೆರಳುತ್ತಿದ್ದಾಗ ಈ ಅವಘಡ ನಡೆದಿದ್ದು 9 ಮಂದಿಗೆ ತೀವ್ರ ಗಾಯಗಳಾಗಿದೆ. ಗಾಯಾಳುಗಳನ್ನು  ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.