ರಾಜ್ಯ

ರೈಲ್ವೆ ಮಾರ್ಗ ವಿರೋಧಿಸಿ ಮೈಸೂರಿನಲ್ಲಿ ಕೊಡವರ ಪ್ರತಿಭಟನೆ

ಕೊಡಗು ಜಿಲ್ಲೆಯಲ್ಲಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಕೊಡವರು ಮೈಸೂರಿನಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರೈಲ್ವೆ ಮಾರ್ಗ ವಿರೋಧಿಸಿ ಮೈಸೂರಿನಲ್ಲಿ ಕೊಡವರ ಪ್ರತಿಭಟನೆ
ಮೈಸೂರಿನಲ್ಲಿಂದು ಕೊಡವರು ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯ ಚಿತ್ರ
Published On :

ಮೈಸೂರು: ಕೊಡಗು ಜಿಲ್ಲೆಯಲ್ಲಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ  ಕೊಡವರು ಮೈಸೂರಿನಲ್ಲಿಂದು  ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

 ಸಹಸ್ರಾರು ಸಂಖ್ಯೆಯಲ್ಲಿ ಮೈಸೂರಿಗೆ ಬಂದಿದ್ದ ಕೊಡವರು, ವಸ್ತುಪ್ರದರ್ಶನ ಕೇಂದ್ರದಿಂದ  ಕೋಟೆ ಆಂಜನೇಯ ಸ್ವಾಮಿ ದೇಗುಲದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.

'ಕೊಡಗನ್ನು ಉಳಿಸಿ, ಕಾವೇರಿ ಕಾಪಾಡಿ' ಎಂಬ  ಘೋಷಣಾ ಘಲಕ ಪ್ರದರ್ಶಿಸಿದ ಪ್ರತಿಭಟನಾಕಾರರು ರೈಲ್ವೆ ಮಾರ್ಗ ನಿರ್ಮಾಣವನ್ನು ಕೂಡಲೇ ಕೈಬಿಡುವಂತೆ ಆಗ್ರಹಿಸಿದರು.

ಬಳಿಕ ಇದೆ ಮಾರ್ಗದಲ್ಲಿ ಹಿಂದಿರುಗಿ ದೇವರಾಜ ಅರಸು ಕುಸ್ತಿ ಮೈದಾನದಲ್ಲಿ ಸಮಾವೇಶಗೊಂಡರು.ನಟ ಸುರೇಶ್ ಹೆಬ್ಳಿಕರ್, ಸುಪ್ರೀಂ ಕೋರ್ಟ್ ವಕೀಲ ಬ್ರಿಜೀಶ್ ಕಾಳಪ್ಪ ಸೇರಿ ಅನೇಕರು ಪಾಲ್ಗೊಂಡಿದ್ದಾರೆ.

ರೈಲ್ವೆ ಮಾರ್ಗ ನಿರ್ಮಾಣಕ್ಕೆ ಸಾವಿರಾರು ಮರ ಹನನ ಮಾಡಲಾಗುತ್ತದೆ. ಇದರಿಂದ ಕಾವೇರಿ ನದಿ ಮೂಲಕ್ಕೆ ಧಕ್ಕೆ ಉಂಟಾಗುತ್ತದೆ. ಕೊಡಗಿನ ಅಸ್ಮಿತೆ ಹಾಳಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.