ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ: ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ
ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ...

Published On :
ಬೆಂಗಳೂರು: ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಹಿನ್ನಲೆ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಎಂಬ ಯುವಕನಿಗೆ ಮನಬಂದಂತೆ ಥಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ತ ಸ್ಥಾನದಿಂದ ಮೊಹಮ್ಮದ್ ನನ್ನು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದಾರೆ.
ಕಳೆದ ರಾತ್ರಿ ರೆಸ್ಟೋರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕೆ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಪಘಾತದಲ್ಲಿ ಮೊದಲೇ ಕಾಲು ಮುರಿದುಕೊಂಡಿದ್ದ ವಿದ್ವತ್ ಊಟಕ್ಕೆಂದು ಯುಬಿ ಸಿಟಿಗೆ ಬಂದಿದ್ದರು. ವಿದ್ವತ್ ಡಾಲರ್ಸ್ ಕಾಲೋನಿಯ ನಿವಾಸಿಯಾದ ಉದ್ಯಮಿ ಲೋಕನಾಥ್ ಎಂಬುವರ ಮಗ ಎಂದು ಪೊಲೀಸರು ತಿಳಿಸಿದ್ದಾರೆ.
ಮೊಹಮ್ಮದ್ ನಲಪಾಡ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದ್ದರು ಪೊಲೀಸರು ಮಾತ್ರ ಆತನನ್ನು ಬಂಧಿಸದೇ ಮೀನಾಮೇಷ ಎಣಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಪರಮೇಶ್ವರ್Parameshwarಕಾಂಗ್ರೆಸ್ ಶಾಸಕUB cityಯುಬಿ ಸಿಟಿMohammed Haris NalapadNA Harrisಎನ್ಎ ಹ್ಯಾರೀಸ್ಮಹಮದ್ ಹ್ಯಾರೀಸ್ ನಳಪಾಡ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


