ಶಾಸಕನ ಪುತ್ರನ ಗೂಂಡಾಗಿರಿ ಪ್ರಕರಣ: ತಪ್ಪು ಯಾರೇ ಮಾಡಿದರೂ ಅದು ತಪ್ಪೇ- ರಾಮಲಿಂಗಾ ರೆಡ್ಡಿ
ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನಿಂದ ಯುವಕನ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಭಾನುವಾರ ಹೇಳಿದ್ದಾರೆ...

Published On :
ಬೆಂಗಳೂರು: ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನಿಂದ ಯುವಕನ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಭಾನುವಾರ ಹೇಳಿದ್ದಾರೆ.
ಪ್ರಕರಣ ಸಂಬಂಧ ಖಾಸಗಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ಅವರು, ಯಾರೇ ತಪ್ಪು ಮಾಡಿದರೂ ಅದು ತಪ್ಪೇ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಎಂದು ಹೇಳಿದ್ದಾರೆ.
ತಪ್ಪು ಮಾಡಿದವರು ಶಿಕ್ಷೆ ಅನುಭವಿಸುವುದು ಖಚಿತ. ಯಾರೇ ತಪ್ಪು ಮಾಡಿದರೂ ಅದು ತಪ್ಪೇ. ಈ ಹಿಂದೆ ಕೂಡ ಎರಡು, ಮೂರು ಬಾರಿ ಇದೇ ರೀತಿ ನಡೆದಿದೆ. ಈ ಬಗ್ಗೆ ಹ್ಯಾರಿಸ್ ಅವರೂ ಕೂಡ ಒಪ್ಪಿಕೊಂಡಿದ್ದಾರೆ. ಹ್ಯಾರಿಸ್ ಮತ್ತು ಅವರ ಗ್ಯಾಂಗ್ ಬಂಧನಕ್ಕೊಳಗಾಗುವುದು ಖಚಿತ. ಕಾನೂನಿಗಿಂತ ದೊಡ್ಡವರೂ ಯಾರೂ ಇಲ್ಲ. ಪೊಲೀಸರು ಇರುವುದೇ ಆರೋಪಿಗಳನ್ನು ಬಂಧನಕ್ಕೊಳಪಡಿಸಲು. ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಸೆಕ್ಷನ್ ಸರಿಯಿಲ್ಲ ಎಂದರೆ, ಸರಿಪಡಿಸಲು ಹೇಳುತ್ತೇನೆ. ಈ ಬಗ್ಗೆ ಪೊಲೀಸ್ ಆಯುಕ್ತರೊಂದಿಗೂ ಮಾತುಕತೆ ನಡೆಸುತ್ತೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressRamalinga Reddyರಾಮಲಿಂಗಾ ರೆಡ್ಡಿಕಾಂಗ್ರೆಸ್ ಶಾಸಕUB cityಯುಬಿ ಸಿಟಿMohammed Haris NalapadNA Harrisಎನ್ಎ ಹ್ಯಾರೀಸ್ಮಹಮದ್ ಹ್ಯಾರೀಸ್ ನಳಪಾಡ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


