ರಾಜ್ಯ

ಪ್ರಧಾನಿ ಮೋದಿಯವರ ಆತಿಥ್ಯಕ್ಕೆ ಸಜ್ಜಾಗಿರುವ ಮೈಸೂರು ನಗರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಕಲ ಸಿದ್ದತೆ...

ಪ್ರಧಾನಿ ಮೋದಿಯವರ ಆತಿಥ್ಯಕ್ಕೆ ಸಜ್ಜಾಗಿರುವ ಮೈಸೂರು ನಗರ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Published On :
ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಕಲ ಸಿದ್ದತೆ ಮಾಡಲಾಗಿದೆ. ಮಂಡಕಹಳ್ಳಿಯಲ್ಲಿರುವ ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯಲಿರುವ ಪ್ರಧಾನಿ, ಇಂದು ರಾತ್ರಿ ಮೈಸೂರಿನಲ್ಲಿ ಉಳಿದುಕೊಂಡು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ ಪ್ರಧಾನಿಯವರು ಮೈಸೂರು-ಬೆಂಗಳೂರು ವಿದ್ಯುತ್ ಚಾಲಿತ ರೈಲು ಮಾರ್ಗವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ನಂತರ ಅವರು ಮೈಸೂರು-ಉದಯ್ ಪುರ ಎಕ್ಸ್ ಪ್ರೆಸ್ ಪ್ಯಾಲೆಸ್ ಕ್ವೀನ್ ಹಮ್ಸಫರ್ ಎಕ್ಸ್ ಪ್ರೆಸ್ ರೈಲಿಗೆ ನಾಳೆ ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಿದ್ದಾರೆ. ನಂತರ ಅವರು ಮಹಾರಾಜ ಮೈದಾನದಲ್ಲಿ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮೈಸೂರಿನ ಎಂ.ಜಿ.ರಸ್ತೆಯಲ್ಲಿರುವ ರಾಡಿಸ್ಸನ್ ಬ್ಲು ಪ್ಲಾಜಾದಲ್ಲಿ  ಪ್ರಧಾನಿಯವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲು ಅಂತಿಮವಾಗಿ ನಿರ್ಧರಿಸಲಾಯಿತು. ವಿಶೇಷ ರಕ್ಷಣಾ ಪಡೆಯ ಅಧಿಕಾರಿಗಳು ಈ ಪ್ರದೇಶದ ಭದ್ರತೆಗೆ ವ್ಯವಸ್ಥೆ ಏರ್ಪಡಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಹೊಟೇಲ್ ಸಿಬ್ಬಂದಿ ಹೊಸದಾಗಿ ಬುಕ್ಕಿಂಗ್ ಮಾಡುವುದನ್ನು ಪ್ರಧಾನಿ ವಾಸ್ತವ್ಯ ಹಿನ್ನೆಲೆಯಲ್ಲಿ ನಾಳೆಯವರೆಗೆ ನಿಲ್ಲಿಸಿದೆ.
ಹೊಟೇಲ್ ನ ಸುತ್ತಮುತ್ತ ತೀವ್ರ ಭದ್ರತೆ ಏರ್ಪಡಿಸಲಾಗಿದೆ. ಪ್ರಧಾನಿ ಆಗಮಿಸುವ ಬೆಂಗಾವಲಿನ ಹಾದಿಯಲ್ಲಿ ಬ್ಯಾರಿಕೇಡ್ ಗಳನ್ನು ನಿರ್ಮಿಸಲಾಗಿದೆ. ಹೊಟೇಲ್ ಸುತ್ತಮುತ್ತ ಸಂಚರಿಸುವ ಪ್ರಾಣಿಗಳನ್ನು ಕೂಡ ತಪಾಸಣೆ ಮಾಡಲಾಗುತ್ತಿದೆ.
ತಪ್ಪಿ ಹೋದ ಲಲಿತ್ ಮಹಲ್ ಅರಮನೆ: ಪ್ರಧಾನ ಮಂತ್ರಿಯವರಿಗೆ ವಾಸ್ತವ್ಯ ಹೂಡಲು ಲಲಿತ್ ಮಹಲ್ ಪ್ಯಾಲೆಸ್ ನ್ನು ಆರಂಭದಲ್ಲಿ ಪರಿಗಣಿಸಲಾಗಿತ್ತು. ಆದರೆ ಮೊದಲೇ ಅಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೊಟೇಲ್ ಕೊಠಡಿ ಕಾಯ್ದಿರಿಸಿದ್ದರಿಂದ ರಾಡಿಸ್ಸನ್ ಬ್ಲು ಪ್ಲಾಜಾ ಹೊಟೇಲನ್ನು ಅಂತಿಮಗೊಳಿಸಲಾಯಿತು.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಸಕಲ ಭದ್ರತೆ ಏರ್ಪಡಿಸಲಾಗಿದೆ. ಆದರೆ ವಸತಿ ವ್ಯವಸ್ಥೆಯನ್ನು ಗೌಪ್ಯವಾಗಿಡಬೇಕಾಗಿರುವುದರಿಂದ ಆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಎ.ಎಸ್.ಸುಬ್ರಹ್ಮಣ್ಯೇಶ್ವರ ರಾವ್ ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.