ಮಲ್ಲಿಕಾರ್ಜುನ ಖರ್ಗೆಗೆ ‘ಜಯದೇವ ಶ್ರೀ’ ಪ್ರಶಸ್ತಿ
ಸಂಸದ, ಲೋಕಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚಿತ್ರದುರ್ಗದ ಮುರುಘಾ ಮಠದ ಬಸವಕೇಂದ್ರ, ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ನೀಡುವ ಜಯದೇವಶ್ರೀ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Published On :
ಚಿತ್ರದುರ್ಗ: ಸಂಸದ, ಲೋಕಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚಿತ್ರದುರ್ಗದ ಮುರುಘಾ ಮಠದ ಬಸವಕೇಂದ್ರ, ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ನೀಡುವ ಜಯದೇವಶ್ರೀ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮೀಜಿ 61ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವದಲ್ಲಿ ಮಾರ್ಚ್ 3ರಂದು ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.
ರಾಜಕಾರಣಿಯಾಗಿ ಸುದೀರ್ಘ ಕಾಲ ಸಮಾಜ ಸೇವೆ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರ ಜೀವಮಾನದ ಸಾಧನೆ ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ ಎಂದು ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.
ಇದೇ ವೇಳೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸಾಹಿತಿ ನಾಡೋಜ ಹಂ.ಪ. ನಾಗರಾಜಯ್ಯ ಅವರಿಗೆ ‘ಶೂನ್ಯಪೀಠ ಅಲ್ಲಮ’ ಪ್ರಶಸ್ತಿ,, ಮಹಿಳಾ ಪರ ಹೋರಾಟಗಾರ್ತಿ ಪ್ರಮೀಳಾ ನೇಸರ್ಗಿ ಅವರಿಗೆ ‘ಶೂನ್ಯಪೀಠ ಅಕ್ಕನಾಗಮ್ಮ’ ಪ್ರಶಸ್ತಿ, ದಾವಣಗೆರೆಯ ಸಮಾಜ ಸೇವಕ ಡಾ.ಸಿ.ಆರ್.ನಸಿರ್ ಅಹಮ್ಮದ್ ಅವರಿಗೆ ‘ಶೂನ್ಯಪೀಠ ಚನ್ನಬಸವ’ ಪ್ರಶಸ್ತಿ ಪ್ರಕಟಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mallikarjun khargeಮಲ್ಲಿಕಾರ್ಜುನ ಖರ್ಗೆHampa nagarajaiahJayadeva ShreeChitradurga Murugarajendra Muttಜಯದೇವ ಶ್ರೀಚಿತ್ರದುರ್ಗ ಮುರುಘರಾಜೇಂದ್ರ ಮಠಹಂ.ಪ. ನಾಗರಾಜಯ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


