ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಸಹಚರರಿಗೆ ಮಾರ್ಚ್ 7ರವರೆಗೆ ನ್ಯಾಯಾಂಗ ಬಂಧನ
ಶಾಸಕ ಹ್ಯಾರಿಸ್ ಪುತ್ರನಿಗೆ ಮೊಹಮ್ಮದ್ ನಲಪಾಡ್ ಹಾಗೂ ಆತನ 8 ಮಂದಿ ಸಹಚರರಿಗೆ ಮಾರ್ಚ್ 7ರ ವರೆಗೂ ನ್ಯಾಯಾಂಗ ಬಂಧನಕ್ಕೆ...

ಬೆಂಗಳೂರು:ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಹಾಗೂ ಆತನ 8 ಮಂದಿ ಸಹಚರರಿಗೆ
ಮಾರ್ಚ್ 7ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 8 ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.
ಯು ಬಿ ಸಿಟಿ ರೆಸ್ಟೋರೆಂಟ್ ನಲ್ಲಿ ನಡೆದಿದ್ದ ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಮೊಹಮ್ಮದ್ ನಲಪಾಡ್ ನನ್ನು ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ ನಂತರ 8 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಎದುರು ಹಾಜರುಪಡಿಸಿದರು.
ಪ್ರಕರಣದ ಬಗ್ಗೆ ವಾದ ವಿವಾದ ಆಲಿಸಿದ ನ್ಯಾಯಾಧೀಶರು ಆರೋಪಿ ಮೊಹಮ್ಮದ್ ನಲಪಾಡ್ ಹಾಗೂ ಆತನ ಸಹಚರರನ್ನು ಮಾರ್ಚ್ 7ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದಾರೆ.
ನ್ಯಾಯಾಲಯದ ಈ ತೀರ್ಪಿನಿಂದಾಗಿ ಮೊಹಮ್ಮದ್ ನಲಪಾಡ್ ನಿಗೆ ಜೈಲೋ ಅಥವಾ ಬೇಲೂ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.ಮತ್ತೊಂದೆಡೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಫೆಬ್ರವರಿ 23ಕ್ಕೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


