ರಾಜ್ಯ

ಸೇವೆ ಖಾಯಂಗೊಳಿಸದಿದ್ದರೆ ಮುಷ್ಕರ : ಪೌರ ಕಾರ್ಮಿಕರ ಜಂಟಿ ಕ್ರಿಯಾಸಮಿತಿ ಎಚ್ಚರಿಕೆ

ಪೌರ ಕಾರ್ಮಿಕರ ಜಂಟಿ ಕ್ರಿಯಾಸಮಿತಿಯೊಂದಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ. ಜೆ. ಜಾರ್ಜ್ ನಿನ್ನೆ ಮಾತುಕತೆ ನಡೆಸಿದರು.

ಸೇವೆ ಖಾಯಂಗೊಳಿಸದಿದ್ದರೆ ಮುಷ್ಕರ : ಪೌರ ಕಾರ್ಮಿಕರ ಜಂಟಿ ಕ್ರಿಯಾಸಮಿತಿ ಎಚ್ಚರಿಕೆ
ಸಚಿವ ಕೆ. ಜೆ. ಜಾರ್ಜ್ ಚಿತ್ರ
Published On :

ಬೆಂಗಳೂರು: ಪೌರ ಕಾರ್ಮಿಕರ ಜಂಟಿ ಕ್ರಿಯಾಸಮಿತಿಯೊಂದಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ. ಜೆ. ಜಾರ್ಜ್ ನಿನ್ನೆ ಮಾತುಕತೆ ನಡೆಸಿದರು.

ನಾಲ್ಕು ಸಾವಿರ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವ ಸರ್ಕಾರದ ನಿರ್ಧಾರಕ್ಕೆ  ಪೌರ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಸದಸ್ಯರು
ತೀವ್ರ ವಿರೋಧ ವ್ಯಕ್ತಪಡಿಸಿ, ತಮ್ಮ ಬೇಡಿಕೆಗಳನ್ನು 15 ದಿನಗಳೊಳಗೆ ಈಡೇರಿಸದಿದ್ದರೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಬೆಂಗಳೂರು ಮಹಾನಗರದಲ್ಲಿ 20 ಸಾವಿರ ಪೌರ ಕಾರ್ಮಿಕರ ಸೇವೆ ಸಲ್ಲಿಸುತ್ತಿದ್ದು, ಅವರೆಲ್ಲರನ್ನು ಖಾಯಂಗೊಳಿಸಬೇಕಾದದ್ದು ಅಗತ್ಯವಾಗಿದೆ ಎಂದು ಒತ್ತಾಯಿಸಿದರು.

ಕೆಲ ಪೌರಕಾರ್ಮಿಕರಿಗೆ ಕಳೆದ ಎಂಟು ತಿಂಗಳಿನಿಂದ ವೇತನವೇ ಬಂದಿಲ್ಲ. ಬಯೋಮೆಟ್ರಿಕ್ ಪದ್ದತಿಯನ್ನು ಗುತ್ತಿಗೆದಾರರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ . ಪೌರ ಕಾರ್ಮಿಕರ ವೇತನಿಂದ 212 ಕೋಟಿಯಷ್ಟು ಕಡಿತ ಮಾಡಿಕೊಳ್ಳುತ್ತಿದ್ದರು. ವಿಮೆ ಪಾವತಿಸಿಲ್ಲ  ಎಂದು ಕಾರ್ಮಿಕ ಮುಖಂಡ ನಾರಾಯಣಸ್ವಾಮಿ ಆರೋಪಿಸಿದರು.

ಸಚಿವ ಕೆ. ಜೆ. ಜಾರ್ಜ್ ಮಾತನಾಡಿ, ಪ್ರತಿ ತಿಂಗಳು 17.500 ರೂ. ನ್ನು ಪೌರ ಕಾರ್ಮಿಕರ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ಜೊತೆಗೆ
ಸಮವಸ್ತ್ರ ನೀಡಲಾಗಿದೆ. ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಊಟ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.