ರಾಜ್ಯ

ಅಮಿತ್ ಶಾ-ಬಂಡಲ್ ಶಾ: ಪೋಸ್ಟ್ ಹಾಕಿದ್ದ ವಿದ್ಯಾರ್ಥಿ ಪುತ್ತೂರು ವಿವಿಎಸ್ ಕಾಲೇಜಿನಿಂದ ಸಸ್ಪೆಂಡ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರನ್ನ ಬಂಡಲ್ ಷಾ ಎಂಬ ಪೋಸ್ಟ್​ನ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ...

ಅಮಿತ್ ಶಾ-ಬಂಡಲ್ ಶಾ: ಪೋಸ್ಟ್ ಹಾಕಿದ್ದ ವಿದ್ಯಾರ್ಥಿ ಪುತ್ತೂರು ವಿವಿಎಸ್ ಕಾಲೇಜಿನಿಂದ ಸಸ್ಪೆಂಡ್
ಅಮಿತ್ ಶಾ
Published On :
ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರನ್ನ ಬಂಡಲ್ ಷಾ ಎಂಬ ಪೋಸ್ಟ್​ನ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. 
ಕಳೆದ ಮಂಗಳವಾರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯಕ್ರಮ ನಡೆದಿತ್ತು. ವಿವೇಕಾನಂದ ಅಂತಿಮ ವರ್ಷದ ಕಾನೂನು ಕಾಲೇಜಿನ ವಿದ್ಯಾರ್ಥಿಯೊಬ್ಬ 'ಬಂಡಲ್ ಷಾ' ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಆ ವಿದ್ಯಾರ್ಥಿಯನ್ನು ಸಸ್ಪೆಂಡ್  ಮಾಡಲಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ನಿರ್ವಹಿಸುತ್ತಿರುವ ವಿವೇಕಾನಂದ ಕಾನೂನು ಕಾಲೇಜಿನ ವಿದ್ಯಾರ್ಥಿ ಜಸ್ಟೀನ್ ನನ್ನು ಕಾಲೇಜು ಆಡಳಿತ ಮಂಡಳಿ 15 ದಿನ ಅಮಾನತುಗೊಳಿಸಿದೆ. 
ಆದರೆ ಈ ಆರೋಪವನ್ನು ನಿರಾಕರಿಸಿರುವ ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿಯನ್ನು ಅಮಾನತುಗೊಳಿಸಿಲ್ಲ, ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.