ರಾಜ್ಯ

ಸಂಗೀತ ವಿದ್ವಾನ್ ಆರ್.ಕೆ. ಪದ್ಮನಾಭ ಅವರಿಗೆ ಪುಟ್ಟರಾಜ ಸಮ್ಮಾನ ಪ್ರಶಸ್ತಿ

ಪ್ರಸಿದ್ಧ ಸಂಗೀತ ವಿದ್ವಾಂಸರಾದ ಆರ್.ಕೆ ಪದ್ಮನಾಭ ಧಾರವಡದ ಪುಟ್ಟರಾಜ ಗವಾಯಿ ಪ್ರತಿಷ್ಠಾನ ನೀಡುವ ’ಪುಟ್ಟರಾಜ ಸಮ್ಮಾನ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಸಂಗೀತ ವಿದ್ವಾನ್ ಆರ್.ಕೆ. ಪದ್ಮನಾಭ ಅವರಿಗೆ ಪುಟ್ಟರಾಜ ಸಮ್ಮಾನ ಪ್ರಶಸ್ತಿ
ಆರ್.ಕೆ. ಪದ್ಮನಾಭ
Published On :
ಮೈಸೂರು: ಪ್ರಸಿದ್ಧ ಸಂಗೀತ ವಿದ್ವಾಂಸರಾದ ಆರ್.ಕೆ ಪದ್ಮನಾಭ ಧಾರವಡದ ಪುಟ್ಟರಾಜ ಗವಾಯಿ ಪ್ರತಿಷ್ಠಾನ ನೀಡುವ ’ಪುಟ್ಟರಾಜ ಸಮ್ಮಾನ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಒಂದು ಲಕ್ಷ ರೂ. ನಗದು ಹಾಗೂ ಫಲಕ ಒಳಗೊಂಡಿರುವ ಈ ಪ್ರಶಸ್ತಿಯನ್ನು ಪುಟ್ಟರಾಜ ಗವಾಯಿಯವರ 105ನೇ ಜನ್ಮ ದಿನದ ಪ್ರಯುಕ್ತ ಮಾ.3ರಂದು  ಮೈಸೂರಿನ ಕಲಾಮಂದಿರದಲ್ಲಿ  ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಎಂ.ವೆಂಕಟೇಶಕುಮಾರ್ ಹೇಳಿದರು.
ಒಬ್ಬ ಸಂಗೀತಗಾರ ಹಾಗೂ ಸಮರ್ಥ ವಾಗ್ಗೇಯಕಾರರೂ ಆಗಿರುವ ಆರ್.ಕೆ. ಪದ್ಮನಾಭ ಬಹುಮುಖ ಪ್ರತಿಭಾವಂತ ವ್ಯಕ್ತಿಯಾಗಿದ್ದಾರೆ. ಪರಮಗುರು, ವಾದಿರಾಜಗುರುವರೇಣ್ಯರ ಶಿಷ್ಯರಾದ ಇವರು ಹಲವಾರು ಶಿಷ್ಯರಿಗೆ ಸಂಗೀತ ವಿದ್ಯೆಯನ್ನು ಧಾರೆ ಎರೆಯುತ್ತಾ ಬಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.