ಕಾರವಾರ: ಫೆ.27ರೊಳಗೆ ಸೀಬರ್ಡ್ ನಿರಾಶ್ರಿತರಿಗೆ ಪರಿಹಾರ ಮೊತ್ತ ಪಾವತಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಕಾರವಾರದ ಸೀಬರ್ಡ್ ನಿರಾಶ್ರಿತರಿಗೆ ನೀಡಬೇಕಿರುವ ಒಟ್ಟು 587 ಕೋಟಿ ರೂ. ಪರಿಹಾರದಲ್ಲಿ 534 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದ್ದು ಉಳಿದ ಪರಿಹಾರ ಮೊತ್ತವನ್ನು.........

Published On :
ಕಾರವಾರ: ಕಾರವಾರದ ಸೀಬರ್ಡ್ ನಿರಾಶ್ರಿತರಿಗೆ ನೀಡಬೇಕಿರುವ ಒಟ್ಟು 587 ಕೋಟಿ ರೂ. ಪರಿಹಾರದಲ್ಲಿ 534 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದ್ದು ಉಳಿದ ಪರಿಹಾರ ಮೊತ್ತವನ್ನು ಫೆ.27ರೊಳಗೆ ಬಿಡುಗಡೆಗೊಳಿಸಲಾಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸೀಬರ್ಡ್ ಯೋಜನಾ ನಿರಾಶ್ರಿತರಿಗೆ ಪರಿಹಾರ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ದೆಹಲಿಯಲ್ಲಿ ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಸೀಬರ್ಡ್ ನಿರಾಶ್ರಿತರ ಪರಿಹಾರಕ್ಕಾಗಿ 459 ಕೋಟಿ ರೂ. ನೀಡಲಾಗಿದೆ. ಇದಕ್ಕೂ ಹಿಂದಿನ ಸರ್ಕಾರದ ಅವಧಿಯಲ್ಲಿ 78 ಕೋಟಿ ರೂ. ಮಾತ್ರ ಬಿಡುಗಡೆಗೊಳಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 96 ನಿರಾಶ್ರಿತರಿಗೆ ಸಚಿವರು ಸಾಂಕೇತಿಕವಾಗಿ ಪರಿಹಾರದ ಚೆಕ್ ಗಳನ್ನು ವಿತರಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KarwarಕಾರವಾರNirmala Sitharamanನಿರ್ಮಲಾ ಸೀತಾರಾಮನ್Defense ministerರಕ್ಷಣಾ ಸಚಿವೆSeabird refugeesಸೀಬರ್ಡ್ ನಿರಾಶ್ರಿತರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


