ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ: ಗೃಹ ಸಚಿವರಿಗೆ ವರದಿ ಸಲ್ಲಿಕೆ
ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಲು ರಚಿಸಿದ್ದ ನ್ಯಾ.ಕೆ.ಎನ್. ಕೇಶವನಾರಾಯಣ ಅವರ ನೇತೃತ್ವದ ಆಯೋಗ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಂದು ವರದಿ ಸಲ್ಲಿಸಿದೆ.

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಲು ರಚಿಸಿದ್ದ ನ್ಯಾ.ಕೆ.ಎನ್. ಕೇಶವನಾರಾಯಣ ಅವರ ನೇತೃತ್ವದ ಆಯೋಗ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಂದು ವರದಿ ಸಲ್ಲಿಸಿದೆ.
320 ಪುಟಗಳ ವರದಿಯಲ್ಲಿ 48 ಸಾಕ್ಷಿಗಳು ಹಾಗೂ ಇಬ್ಬರು ತನಿಖಾಧಿಕಾರಿಗಳ ವಿಚಾರಣೆ ನಡೆಸಿರುವ ಮಾಹಿತಿ ಒಳಗೊಂಡಿದೆ.
2016ರ ಜುಲೈ 7ರಂದು ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಮಡಿಕೇರಿಯ ವಸತಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಚಿವ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ, ಎ.ಎಂ. ಪ್ರಸಾದ್ ನನ್ನ ಸಾವಿಗೆ ಕಾರಣ ಎಂದು ಗಣಪತಿ ಸಾವಿಗೆ ಮುನ್ನ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಸೋಮವಾರಪೇಟೆ ತಾಲ್ಲೂಕಿನ ರಂಗಸಮುದ್ರದ ಗಣಪತಿ ಮಂಗಳೂರು ಐಜಿ ಕಚೇರಿಗೆ ವರ್ಗವಾಗಿದ್ದರು. ಅವರ ಮೊಬೈಲ್, ಕಂಪ್ಯೂಟರ್‌ನಲ್ಲಿದ್ದ ದಾಖಲೆಗಳನ್ನು ನಾಶ ಮಾಡಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಿಂದ ಬಹಿರಂಗವಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಸಚಿವ ಜಾರ್ಜ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


