ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಎಚ್.ಡಿ ದೇವೇಗೌಡ ವಿರೋಧ
ಕಾವೇರಿ ವಿಚಾರದಲ್ಲಿ ನ್ಯಾಯಾಲಯ ತೀರ್ಪಿಗೆ ದೊಡ್ಡದಾಗಿ ಸಂತೋಷ ಬದಲು ರಾಜ್ಯಸರ್ಕಾರ ಕಾನೂನು ತಜ್ಞರ ಸಲಹೆ ಪಡೆಯಬೇಕೆಂದು ಕಿವಿಮಾತು ಹೇಳಿದ್ದಾರೆ. ...

Published On :
ಬೆಂಗಳೂರು: ಕಾವೇರಿ ವಿಚಾರದಲ್ಲಿ ನ್ಯಾಯಾಲಯ ತೀರ್ಪಿಗೆ ದೊಡ್ಡದಾಗಿ ಸಂತೋಷ ಬದಲು ರಾಜ್ಯಸರ್ಕಾರ ಕಾನೂನು ತಜ್ಞರ ಸಲಹೆ ಪಡೆಯಬೇಕೆಂದು ಕಿವಿಮಾತು ಹೇಳಿದ್ದಾರೆ. ರಾಜ್ಯಕ್ಕೆ ತೀರ್ಪಿನಿಂದ ಅನ್ಯಾಯವಾಗಿದೆ. ನಮಗೆ 40 ಟಿಎಂಸಿ ಹೆಚ್ಚುವರಿ ನೀರು ಕೊಡಬೇಕಿತ್ತು ಆದರೆ ಕೇವರ 14 ಟಿಎಂಸಿ ನೀರು ಮಾತ್ರ ನೀಡಿದ್ದಾರೆ.
ತೀರ್ಪು ಬಂದ ಮೇಲೆ ಸಿಹಿ ವಿತರಣೆ ಮಾಡಿದ್ದರಲ್ಲಿ ಅರ್ಥವಿಲ್ಲ. ಹೆಚ್ಚುವರಿ ನೀರಿಗಾಗಿ ಕಾನೂನು ಹೋರಾಟ ನಡೆಸುವ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಪೂರ್ಣ ಪ್ರಮಾಣದ ನ್ಯಾಯ ದೊರೆತಿಲ್ಲ. ಇದರ ಬಗ್ಗೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಕಿಂಚಿತ್ತೂ ಕಾಳಜಿ ಇಲ್ಲ. ಮುಂದೇನು ಮಾಡಬೇಕು ಎಂಬುದು ಬಿಟ್ಟು ಯಾತ್ರೆಗಳಲ್ಲಿ ಮುಳುಗಿವೆ. ಇವರಿಗೇನು ಹೇಳ್ಳೋಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟಿನ ತೀರ್ಪನ್ನು ಪ್ರಶ್ನಿಸಿ ತಮಿಳುನಾಡು ಮರುಪರಿಶೀಲನಾ ಅರ್ಜಿ ಸಲ್ಲಿಸಲು ಚರ್ಚೆ ನಡೆಸುತ್ತಿದೆ. ಆದರೆ ನಮ್ಮ ರಾಜ್ಯದ ಎರಡು ರಾಷ್ಟ್ರೀಯ ಪಕ್ಷಗಳು 10 ಪರ್ಸೆಂಟ್ ಕಮೀಷನ್ ಎಂದು, ಮತ್ತೊಬ್ಬರು 90 ಪರ್ಸೆಂಟ್ ಕಮೀಷನ್ ಪಡೆದಿದ್ದಾರೆಂಬ ಆರೋಪ-ಪ್ರತ್ಯಾರೋಪದ ನಡುವೆ ಕಾವೇರಿ ವಿಚಾರದಲ್ಲಿ ಆಗಿರುವ ಅನ್ಯಾಯ ಯಾರಿಗೂ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದರು
ತೀರ್ಪಿನಲ್ಲಿ ಅಚ್ಚುಕಟ್ಟು ಪ್ರದೇಶ ಹೆಚ್ಚು ಮಾಡಿಕೊಳ್ಳುವಂತಿಲ್ಲ. ಹೊಸ ಯೋಜನೆ ಪ್ರಾರಂಭಿಸುವಂತಿಲ್ಲ ಎಂಬೆಲ್ಲಾ ಅಂಶಗಳಿವೆ. ಸೂಕ್ಷ್ಮವಾಗಿ ಗಮನಿಸಿ ಕಾನೂನು ತಜ್ಞರ ಜತೆ ಚರ್ಚಿಸಿ ಹೆಜ್ಜೆ ಇಡಬೇಕಿದೆ.
ತೀರ್ಪು ನೀಡಿದ ಆರು ವಾರದೊಳಗೆ ನಿರ್ವಹಣಾ ಪ್ರಾಧಿಕಾರ ರಚಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ನಿರ್ವಹಣಾ ಪ್ರಾಧಿಕಾರದಿಂದ ತೊಂದರೆಯಾಗದು ಎಂದು ಕೆಲವರು ಹೇಳುತ್ತಾರೆ. ಪ್ರಾಧಿಕಾರ ಯಾವ ಕಾಯ್ದೆಯಡಿ ಮಾಡ್ತಾರೆ ಎಂಬುದನ್ನು ಮೊದಲು ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


