ಕಲಬುರ್ಗಿ: ರಾಜ್ಯಸಾರಿಗೆ ಸಂಸ್ಥೆ ಬಸ್ ಡಿಪೋದಲ್ಲಿ ಬೆಂಕಿ
ಇಲ್ಲಿನ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ 3ರಲ್ಲಿ ಇಂದು ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.

ಕಲಬುರ್ಗಿ: ಇಲ್ಲಿನ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ 3ರಲ್ಲಿ ಇಂದು ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.
ಇದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತು ಧಗಧಗನೆ ಹೊತ್ತಿ ಉರಿದಿದೆ. ಪರಿಣಾಮ ಹಲವು ಬಸ್ ಗಳಿಗೆ ಬೆಂಕಿ ವ್ಯಾಪಿಸಿದ್ದು, ದಟ್ಟವಾದ ಹೊಗೆ ಆವರಿಸಿಕೊಂಡಿತ್ತು
ಘಟನೆಯಲ್ಲಿ ಹಲವು ಬಸ್‌ಗಳು ಬೆಂಕಿ ತಗುಲಿ ಸುಟ್ಟು ಭಸ್ಮವಾಗಿವೆ. ಜತೆಗೆ ನೂರಾರು ಟೈರ್‌ಗಳು ಬೆಂಕಿಗಾಹುತಿ ಆಗಿವೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುವಂತಾಗಿದೆ.ಘಟನೆಯಿಂದ ಡಿಪೋಪಕ್ಕದ ಬಡಾವಣೆಯ ಜನರಲ್ಲಿ ಕೆಲಕಾಲ ಆತಂಕ ಮನೆ ಮಾಡಿತ್ತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


