ಮತಯಂತ್ರದ ಕುರಿತು ತಪ್ಪು ಮಾಹಿತಿ ಹರಡಿದರೆ ಕ್ರಿಮಿನಲ್ ಮೊಕದ್ದಮೆ: ರಾಜ್ಯ ಚುನಾವಣಾ ಆಯೋಗ
ಮತಯಂತ್ರದ ಕುರಿತು ತಪ್ಪು ಮಾಹಿತಿ ಹರಡಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ...

Published On :
ಬೆಂಗಳೂರು: ಮತಯಂತ್ರದ ಕುರಿತು ತಪ್ಪು ಮಾಹಿತಿ ಹರಡಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಒಟ್ಟು 73,850 ಮತಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ. ಈಗಾಗಲೇ 56,290 ಮತಯಂತ್ರಗಳು ರಾಜ್ಯಕ್ಕೆ ಬಂದಿವೆ. ಮಹಾರಾಷ್ಟ್ರ, ಗುಜರಾತ್, ಜಾರ್ಖಂಡ್ ಮತ್ತು ತಮಿಳುನಾಡು ರಾಜ್ಯಗಳಿಂದ ಇವಿಎಂ ತರಿಸಿಕೊಳ್ಳಲಾಗಿದೆ. ಉತ್ತರಪ್ರದೇಶದಿಂದ 40 ಸಾವಿರ ಇವಿಎಂ ತರಿಸಿಕೊಳ್ಳಲಾಗಿದ್ದು, ಇವಿಎಂ ಬಳಕೆಯಲ್ಲಿ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗುಜರಾತ್ ಮತ್ತು ಉತ್ತರಪ್ರದೇಶಗಳಲ್ಲಿ ಬಳಸಿರುವ ಇವಿಎಂಗಳು ರಾಜ್ಯಕ್ಕೆ ಬಂದಿವೆ ಎಂಬ ಅನುಮಾನ ಬೇಡ. ಈ ಕುರಿತು ತಪ್ಪು ಮಾಹಿತಿ ಹರಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ಚಲಾಯಿಸಿದ ಮತ ಬೇರೆ ಅಭ್ಯರ್ಥಿಗೆ ಚಲಾವಣೆ ಆಗಿದೆ ಎಂಬ ಅನುಮಾನ ಬಂದರೆ ಆಕ್ಷೇಪಣೆ ಸಲ್ಲಿಸಬಹುದು. ಅದರಲ್ಲಿ ಯಾವುದೇ ಲೋಪ ಕಂಡುಬರದಿದ್ದರೆ ದೂರುದಾರನ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಂಜೀವ್ ಕುಮಾರ್ ಅವರು ತಿಳಿಸಿದ್ದಾರೆ.
ಮತ ಚಲಾಯಿಸಿದ ಬಳಿಕ ಮತದಾರ 7 ಸೆಕೆಂಡ್ ಗಳವರೆಗೆ ಯಂತ್ರದಲ್ಲಿ ನೋಡುವ ಹೊಸ ವಿಧಾನ ಆಳವಡಿಕೆಯಾಗಿದೆ. ಮತದಾನಕ್ಕೂ ಮುನ್ನ ಪ್ರತಿ ಮತಯಂತ್ರದಲ್ಲಿ 50 ಮಂದಿ ಮತ ಚಲಾಯಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಪರೀಕ್ಷೆ ಬಳಿಕ ಅಭ್ಯರ್ಥಿಗಳ ಹೆಸರನ್ನು ಯಂತ್ರಕ್ಕೆ ಅಳವಡಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಅಂತಿಮ ಮತದಾರರ ಪಟ್ಟಿ ಸಿದ್ಧವಾಗಿದ್ದು ಒಟ್ಟು 4,96,56,059 ಮತದಾರರಿದ್ದಾರೆ. ಇದರಲ್ಲಿ ಪುರುಷರು 2,51,79,219 ಮತ್ತು ಮಹಿಳೆಯರು 2,44,72,288 ಮತದಾರರಿದ್ದಾರೆ. ಹೊಸದಾಗಿ 15,56,141 ಮತದಾರರು ಈ ಬಾರಿ ಮತ ಚಲಾಯಿಸಲಿದ್ದಾರೆ. 2,73,213 ಬದಲಾವಣೆಯಾಗಿದ್ದು 9,17,398 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


