ರಾಜ್ಯ

ಬೆಂಗಳೂರು: 'ವಂಡರ್ ಲಾ'ಗೆ ನುಗ್ಗಿದ ಚಿರತೆ ಸೆರೆ ಹಿಡಿದ ಅರಣ್ಯ ಸಿಬ್ಬಂದಿ

ಬೆಂಗಳೂರಿನ ಹೊರವಲಯದ ಬಿಡದಿ ಬಳಿ ಇರುವ ವಂಡರ್‌ ಲಾ ಅಮ್ಯೂಸ್‌ಮೆಂಟ್‌ ಪಾರ್ಕ್ ಗೆ ಬುಧವಾರ....

ಬೆಂಗಳೂರು:  'ವಂಡರ್ ಲಾ'ಗೆ ನುಗ್ಗಿದ ಚಿರತೆ ಸೆರೆ ಹಿಡಿದ ಅರಣ್ಯ ಸಿಬ್ಬಂದಿ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಬೆಂಗಳೂರಿನ ಹೊರವಲಯದ ಬಿಡದಿ ಬಳಿ ಇರುವ ವಂಡರ್‌ ಲಾ ಅಮ್ಯೂಸ್‌ಮೆಂಟ್‌ ಪಾರ್ಕ್ ಗೆ ಬುಧವಾರ ನುಗ್ಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. 
ಇಂದು ಮಧ್ಯಾಹ್ನ ಚಿರತೆಯೊಂದು ವಂಡರ್ ಲಾಗೆ ನುಗಿತ್ತು. ಇದರಿಂದ ಪ್ರವಾಸಿಗರು ಮತ್ತು ಸಿಬ್ಬಂದಿ ಆತಂಕಕ್ಕೀಡಾಗಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಬನ್ನೇರುಘಟ್ಟ ಅರಣ್ಯಾಧಿಕಾರಿಗಳು ಮತ್ತು ಬಿಡದಿ ಪೊಲೀಸರು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬನ್ನೇರುಘಟ್ಟ ವೈದ್ಯರಿಂದ ಅರಿವಳಿಕೆ ಮದ್ದು ನೀಡಿ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ನುಗ್ಗಿದ್ದ ಚಿರತೆಯನ್ನು ಸೆರೆಹಿಡಿಯಲಾಗಿದೆ.
ಪಕ್ಕದ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಿರತೆಯು ಪಾರ್ಕಿನ ಒಳಗೆ ಪ್ರವೇಶಿಸಿತು ಎನ್ನಲಾಗಿದೆ.
ವಂಡರ್‌ ಲಾ ಒಳಗೆ‌ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರಿದ್ದು ತೀವ್ರ ಆತಂಕಗೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.