ರಾಜ್ಯ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 1ರಿಂದ ಇದೇ 17ರವರೆಗೆ ....

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ  ಮಾರ್ಚ್ 1ರಿಂದ ಇದೇ 17ರವರೆಗೆ ರಾಜ್ಯದಾದ್ಯಂತ ನಡೆಯಲಿದೆ. ರಾಜ್ಯದ 1004 ಕೇಂದ್ರದಲ್ಲಿ ನಡೆಯುವ ಪರೀಕ್ಷೆಯಲ್ಲಿ 6.90 ಲಕ್ಷ ವಿದ್ಯಾರ್ಥಿಗಳು ಬರೆಯಲಿದ್ದಾರೆ.

ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು  ಆಯಾ ತಾಲೂಕುಗಳ ಮೂಲಕ ಪರೀಕ್ಷಾ ಕೇಂದ್ರಕ್ಕೆ ಸರಬರಾಜು ಮಾಡುವ ಕಾರ್ಯ ನಡೆಯುತ್ತಿದೆ. ಅರ್ಥಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳಿಂದ ಆರಂಭಗೊಳ್ಳುವ ಪರೀಕ್ಷೆ, ಇಂಗ್ಲಿಷ್‌ ವಿಷಯದೊಂದಿಗೆ ಕೊನೆಯಾಗಲಿದೆ. ಪ್ರತಿದಿನ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ತನಕ ಪರೀಕ್ಷೆ ನಡೆಯಲಿದೆ.

ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿಷಯಗಳು ಒಟ್ಟೊಟ್ಟಿಗೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಈಗಾಗಲೇ ಪ್ರವೇಶ ಪತ್ರ ವಿತರಣೆಯಾಗಿದೆ. ಇಲಾಖೆಯ ನಿಯಮದಂತೆ ಶೇ.75ರಷ್ಟು ಹಾಜರಾತಿ ಇಲ್ಲದ ಸುಮಾರು 3 ಸಾವಿರ ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶಪತ್ರವನ್ನು ತಡೆಹಿಡಯಲಾಗಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ದೂರವಾಣಿ ಸಂಖ್ಯೆ :080-23083900ಗೆ ಕರೆ ಮಾಡಿ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ಪಡೆಯಬಹುದಾಗಿದೆ. ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ನಲ್ಲಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಮತ್ತು ಪ್ರಶ್ನೆ ಪತ್ರಿಕೆ ಸರಬರಾಜು ಮಾಡುವ ವಾಹನಕ್ಕೆ ಜಿಪಿಎಸ್‌ ಅಳವಡಿಸಲಾಗಿದೆ. ಯಾವುದೇ ಗೊಂದಲ ಇಲ್ಲದೇ ಸುಗಮವಾಗಿ ಪರೀಕ್ಷೆ ನಡೆಸಲು ಇಲಾಖೆ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ.

ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷೆಗಳು ಬೇಗನೆ ಮುಕ್ತಾಯವಾಗಲಿದೆ.  ಮಾ.23ರಿಂದ ಏ.6ರ ತನಕ ಹತ್ತನೇ ತರಗತಿ ಪರೀಕ್ಷೆ ನಡೆಯಲಿದ್ದು, 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಏ.18 ಮತ್ತು 19ರಂದು ಸಿಇಟಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.