ರಾಜ್ಯ

ತುಮಕೂರು: ಬಾಲಕಿ ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ದುರ್ಮರಣ

ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಕುಟುಂಬವೊಂದು ಗೊರವನಹಳ್ಳಿ ಲಕ್ಷ್ಮೀ ದೇಗುಲಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕಿನ ಗವಿಮಠದ...

ತುಮಕೂರು: ಬಾಲಕಿ ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ದುರ್ಮರಣ
ಸಾಂದರ್ಭಿಕ ಚಿತ್ರ
Published On :
ತುಮಕೂರು: ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಕುಟುಂಬವೊಂದು ಗೊರವನಹಳ್ಳಿ ಲಕ್ಷ್ಮೀ ದೇಗುಲಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕಿನ ಗವಿಮಠದ ಬಳಿ ನಡೆದಿದೆ. 
ಸಿದ್ದೋಜಿ ರಾವ್ (55), ಉಷಾ ಭಾಯ್ (26), ಕೀರ್ತನಾ (6), ಹಿತೇಶ್ (2) ಹಾಗೂ ಭುವನ್ (16) ಸಾವನ್ನಪ್ಪಿದ ಒಂದೇ ಕುಟುಂಬ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ನಗರ ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಮಕ್ಕಳು ಸೇರಿದಂತೆ ಒಂದೇ ಕುಟುಂಬದ 11 ಮಂದಿ ಕಾರಿನಲ್ಲಿ ಗೊರವನಹಳ್ಳಿ ಲಕ್ಷ್ಮೀ ದೇಗುಲಕ್ಕೆ ತೆರಳುತ್ತಿದ್ದರು. ಈ ವೇಳೆ ಕುಣಿಗಲ್ ತಾಲೂಕಿನ ಗವಿಮಠದ ಬಳಿಯಿರುವ ಆಂಜನೇಯ ದೇಗುಲದ ಹೆದ್ದಾರಿಯಲ್ಲಿ ಬಾಲಕಿಯೊಬ್ಬಳು ರಸ್ತೆ ದಾಟುತ್ತಿದ್ದಳು. ಕಾರು ಚಾಲನೆ ಮಾಡುತ್ತಿದ್ದ ಹರೀಶ್ ರಾವ್ ಅವರು ಬಾಲಕಿಯನ್ನು ರಕ್ಷಣೆ ಮಾಡಲು ಹೋಗಿ ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ರಕ್'ಗೆ ರಭಸದಿಂದ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ದುರಂತ ಸಂಭವಿಸಿದೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.