ಕರ್ನಾಟಕ ಅಭಿವೃದ್ಧಿ ಇತರರಿಗೆ ಮಾದರಿಯಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕ ರಾಜ್ಯದ ಅಭಿವೃದ್ಧಿ ಇತರರಿಗೆ ಮಾದರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ...

Published On :
ಬೆಂಗಳೂರು: ಕರ್ನಾಟಕ ರಾಜ್ಯದ ಅಭಿವೃದ್ಧಿ ಇತರರಿಗೆ ಮಾದರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
'ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ಆಯೋಜಿಸಿದ್ದ 'ವಿಷನ್ 2025' ಸಮಾವೇಶದಲ್ಲಿ ಮಾತನಾಡಿರುವ ಅವರು, ನವ ಕರ್ನಾಟಕ-2025 ನಿರ್ಮಾಣಕ್ಕೆ ತಮ್ಮ ಸರ್ಕಾರ ಕೈಗೊಂಡಿರುವ ಉಪಕ್ರಮಗಳು ಹಾಗೂ ಅವರ ಜೀವನದ ಅನುಭವಗಳನ್ನು ಹಂಚಿಕೊಂಡರು.
ಜೀವನದಲ್ಲಿ ಹಸಿವು, ಬಡತನ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಅನುಭವಿಸಿದ್ದೇನೆ. ರಾಜ್ಯ ಬಜೆಟ್'ನ್ನು ಘೋಷಣೆ ಮಾಡುವ ವೇಳೆ ನನ್ನ ಅನುಭವಗಳೇ ನನಗೆ ಮಾರ್ಗದರ್ಶನ ನೀಡಿತ್ತು. ಬಸವೇಶ್ವರ, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿಯವರು ರಚಿಸಿದ ಅಭಿವೃದ್ಧಿಯೆಂಬ ತತ್ವಶಾಸ್ತ್ರದೊಂದಿಗೆ ಪ್ರತೀ ವಿಭಾಗ ಹಾಗೂ ಸಮಾಜದ ಪ್ರತೀ ಕ್ಷೇತ್ರವನ್ನು ಸಬಲೀಕರಣಗೊಳಿಸುವ ಮೂಲಕ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯಬಹುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ರಾಜ್ಯ ಸರ್ಕಾರ ಕೈಗೊಂಡಿರುವ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್, ಆಶ್ರಯ ಯೋಜನೆಗಳನ್ನು ಹೆಸರಿಸಿ ಗುಜರಾತ್ ಮಾದರಿ ಕುರಿತಂತೆ ತೀವ್ರವಾಗಿ ಕಿಡಿಕಾರಿದ್ದಾರೆ, ಅಲ್ಲದೆ, ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚುವ ಕುರಿತಂತೆ ಭರವಸೆಯನ್ನು ನೀಡಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಕರ್ನಾಟಕ ರಾಜ್ಯ ಉದ್ಯೋಗ ಸೃಷ್ಟಿಸುವುದರಲ್ಲಿ ಉತ್ತಮ ಸ್ಥಾನದಲ್ಲಿರಲಿದೆ ಎಂದು ತಿಳಿಸಿದ್ದಾರೆ.
ಸಮಾವೇಸದಲ್ಲಿ ಸಚಿವ ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್, ರಾಮಲಿಂಗಾ ರೆಡ್ಡಿ, ಬಸವರಾಜ ರಾಯರೆಡ್ಡಿ, ತನ್ವೀರ್ ಸೇಠ್ ಮತ್ತು ನಟ ರಮೇಶ್ ಅರವಿಂದ್ ಸೇರಿದಂತೆ ಇನ್ನಿತರೆ ಗಣ್ಯಾತಿಗಣ್ಯರು ಹಾಜರಿದ್ದರು.
ಕರ್ನಾಟಕ ದೂರದೃಷ್ಟಿಯುಳ್ಳ ರಾಜ್ಯವಾಗಿದೆ: ಆರ್.ವಿ. ದೇಶಪಾಂಡೆ
ಕರ್ನಾಟಕ ದೂರದೃಷ್ಟಿಯುಳ್ಳ ರಾಜ್ಯವಾಗಿದ್ದು, ಸಮಯ ಬರುವುದಕ್ಕೂ ಮೊದಲೇ ಆ ವಿಚಾರದ ಬಗ್ಗೆ ಚಿಂತನೆ ನಡೆಸಿರುತ್ತದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆಯವರು ಸೋಮವಾರ ಹೇಳಿದ್ದಾರೆ.
'ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ಆಯೋಜಿಸಿದ್ದ 'ವಿಷನ್-2025' ಸಮಾವೇಶದಲ್ಲಿ ಮಾತನಾಡಿರುವ ಅವರು, ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಆಕರ್ಷಣೀಯ ತಾಣವಾಗಬೇಕೆಂದು ನಾವು ಬಯಸಿದ್ದೇವೆ. ಈ ಬಗ್ಗೆ ಸರ್ಕಾರ ಕೂಡ ಸಾಕಷ್ಟು ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.
ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ರಾಜ್ಯಕ್ಕೆ 24*7 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKarnatakaಕರ್ನಾಟಕThe New Indian Expressdevelopment modelVision-2025ವಿಷನ್-2025ದಿ ನ್ಯೂ ಇಂಡಿಯನ್ ಎಕ್ಸ್\'ಪ್ರೆಸ್ಅಭಿವೃದ್ಧಿ ಮಾದರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


