ಸರ್ಕಾರಿ ನೌಕರರ ಕುಟುಂಬದ ಆಸ್ತಿ ವಿವರ ಸಲ್ಲಿಕೆ ಕಡ್ದಾಯ: ಸಚಿವ ಸಂಪುಟ ಮಹತ್ವದ ನಿರ್ಧಾರ
ಸರ್ಕಾರಿ ನೌಕರರು ಮತ್ತು ಜನಪ್ರತಿನಿಧಿಗಳು ಇನ್ನು ತಮ್ಮ ಕುಟುಂಬದವರ ಸ್ಥಿರ, ಚರ ಆಸ್ತಿಗಳ ವಿವರ ನೀಡುವುದು ಕಡ್ಡಾಯವಾಗಲಿದೆ.

Published On :
ಬೆಂಗಳುರು: ಸರ್ಕಾರಿ ನೌಕರರು ಮತ್ತು ಜನಪ್ರತಿನಿಧಿಗಳು ಇನ್ನು ತಮ್ಮ ಕುಟುಂಬದವರ ಸ್ಥಿರ, ಚರ ಆಸ್ತಿಗಳ ವಿವರ ನೀಡುವುದು ಕಡ್ಡಾಯವಾಗಲಿದೆ. ನೌಕರರ ಪೋಷಕರು, ಮಕ್ಕಳ ಹೆಸರಿನಲ್ಲಿ ಇರುವ ಎಲ್ಲಾ ಆಸ್ತಿ, ನಗದು ವಿವರಗಳನ್ನು ಲೋಕಾಯುಕ್ತಕ್ಕೆ ನೀಡುವುದನ್ನು ಕಡ್ಡಾಯಗೊಳಿಸಿ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಲು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಈ ಕುರಿತಂತೆ ಮಾಹಿತಿ ನೀಡಿದ್ದಾರೆ. ಸರ್ಕಾರಿ ನೌಕರರು ಈ ಹಿಂದೆ ತಾನು ಮತ್ತು ತನ್ನ ಪತ್ನಿಯ ಹೆಸರಲ್ಲಿದ ಆಸ್ತಿ ವಿವರಗಳನ್ನು ಮಾತ್ರ ಲೋಕಾಯುಕ್ತಕ್ಕೆ ನೀಡಬೇಕಿತ್ತು. ಆದರೆ ಇನ್ನು ಮುಂದೆ ಅವರ ಪೋಷಕರು, ಮಕ್ಕಳು ಸೇರಿ ಅವಲಂಬಿತರ ಹೆಸರಲ್ಲಿರುವ ಆಸ್ತಿಗಳ ವಿವರಗಳನ್ನು ಸಹ ನೀಡಬೇಕಾಗುತ್ತದೆ. ಬ್ಯಾಂಕ್ ಖಾತೆಗಳ ವಿವರ, 10 ಸಾವಿರಕ್ಕಿಂತ ಹೆಚ್ಚಿನ ಮೌಲ್ಯದ ವಸ್ತುಗಳ ವಿವರ ನೀಡಬೇಕಿದೆ.
ಇದರೊಡನೆ ನೌಕರರ ಕುಟುಂಬ ಆಸ್ತಿ ಮೌಲ್ಯಗಳ ವಿವರ ನೀಡುವಾಗಲೂ ಆಸ್ತಿ ಖರೀದಿಸುವಾಗ ಪಾವತಿಸಿದ ಮೊತ್ತದೊಡನೆ ಮಾರ್ಗಸೂಚಿ ದರದ ಆಧಾರದಲ್ಲಿ ವಿವರ ಒದಗಿಸಬೇಕು.
ಸಂಪುಟ ಸಭೆಯ -ತೀರ್ಮಾನಗಳು-
ಇನ್ನು ಸಚಿವ ಸಂಪುಟ ಸಭೆಯ ಇತರೆ ತೀರ್ಮಾನಗಳೆಂದರೆ - ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಳಕ್ಕೆ ಅವಕಾಶವಾಗುವಂತೆ ಆಶಾದೀಪ ಯೋಜನೆ ಜಾರಿ.
ಅಕ್ರಮ ಮರಳುಗಾರಿಕೆ, ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯುವವರ ವಿರುದ್ಧ ಗೂಂಡಾ ಕಾಯ್ದೆ ಜಾರಿ.
ಪಾವಗಡ ಸೇರಿ ಕರ್ನಾಟಕದ ಗಡಿ ಭಾಗದ ತಾಲೂಕು, ಗ್ರಾಮಗಳಿಗೆ ನೀರನ್ನು ಸರಬರಾಜು ಮಾಡಲು 2,352.60 ಕೋಟಿ ಕುಡಿಯುವ ನೀರಿನ ಯೋಜನೆಗೆ ಅಸ್ತು.
ಹೈಕೋರ್ಟ್ ನಲ್ಲಿ ಕೆಲಸ ಮಾಡುವವರಿಗೆ, ನ್ಯಾಯಾಲಯ ನೌಕರರಿಗೆ ಕೇಂದ್ರ ಸರ್ಕಾರದ ವೇತನ ನಿಯಮಾವಳಿ ಅನುಸಾರ ವೇತನ ಪಾವತಿಗೆ ರಾಜ್ಯ್ಸ ಸರ್ಕಾರ ಸಮ್ಮತಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


