ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರ ಶತಾಯುಷಿ ಅತ್ತೆ ನಿಧನ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಅತ್ತೆ ಕಾಳಮ್ಮ(100) ನಿಧನರಾಗಿದ್ದಾರೆ

ಮಾಜಿ ಪ್ರಧಾನಿ ದೇವೇಗೌಡರ ಶತಾಯುಷಿ ಅತ್ತೆ ನಿಧನ
ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ
Published On :
ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಅತ್ತೆ ಕಾಳಮ್ಮ(100) ನಿಧನರಾಗಿದ್ದಾರೆ.
ದೇವೇಗೌಡರ ಪತ್ನಿ ಚೆನ್ನಮ್ಮನವರ ತಾಯಿಯಾದ ಕಾಳಮ್ಮ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಾಲ್ಲಿಂದ ಮರಳಿದ ಬಳಿಕ ಹಾಸನದ ಮನೆಯಲ್ಲಿದ್ದರು.
ಅತ್ತೆ ನಿಧನದ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ಶಾರದಾ ಪೀಠದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದಿಂದ ದೇವೇಗೌಡರು ವಾಪಾಸಾಗಿದ್ದಾರೆ. ಯಾಗದ ಎರಡನೇ ದಿನವಾದ ಇಂದು ದೇವೇಗೌಡ, ಅವರ ಪತ್ನಿ ಚೆನ್ನಮ್ಮ ಹಾಗು ಕುಟುಂಬದವರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮೃತರ ಅಂತ್ಯಕ್ರಿಯೆ ಹೊಳೆನರಸೀಪುರ ತಾಲೂಕಿನ ಮುತ್ತಿಗೆ ಹಿರಿಯಳ್ಳಿಯಲ್ಲಿ ನಡೆಯುವುದೆಂದು ಮಾಹಿತಿ ಲಭ್ಯವಾಗಿದ್ದು ದೇವೇಗೌಡರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.