ರಾಜ್ಯ

ಹೃದಯವಿದ್ರಾವಕ ಘಟನೆ: ವಿವಾಹ ಆಹ್ವಾನ ಪತ್ರಿಕೆ ಹಂಚಿ ಹಿಂದಿರುಗುವಾಗ ಅಪಘಾತ; ಮಧುಮಗ, ತಾಯಿ ಸಾವು

ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ನಿಶ್ಚಯವಾಗಿದ್ದ ಮಧುಮಗ ಮತ್ತು ಆತನ ತಾಯಿ ದಾರುಣ...

ಹೃದಯವಿದ್ರಾವಕ ಘಟನೆ: ವಿವಾಹ ಆಹ್ವಾನ ಪತ್ರಿಕೆ ಹಂಚಿ ಹಿಂದಿರುಗುವಾಗ ಅಪಘಾತ; ಮಧುಮಗ, ತಾಯಿ ಸಾವು
ಅಪಘಾತ
Published On :
ತುಮಕೂರು: ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ನಿಶ್ಚಯವಾಗಿದ್ದ ಮಧುಮಗ ಮತ್ತು ಆತನ ತಾಯಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. 
ಜನವರಿ 22ರಂದು 26 ವರ್ಷದ ಮೃತ ಮಂಜುನಾಥ ಹಸೆಮಣೆ ಹೇರಬೇಕಿತ್ತು. ಆದರೆ ವಿಧಿಯಾಟ ಬೇರೆಯೇ ಇತ್ತು. ಮಂಜುನಾಥ್ ಮತ್ತು ಆತನ ತಾಯಿ 48 ವರ್ಷದ ಕಂಬಕ್ಕ ಇಬ್ಬರು ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಹಿಂದಿರುಗುವಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 
ಬೈಕ್ ನಲ್ಲಿ ತಾಯಿ ಮತ್ತು ಮಗ ಇಬ್ಬರು ಬಂಧು ಮಿತ್ರರಿಗೆ ಆಹ್ವಾನ ಪತ್ರಿಕೆ ಹಂಚುತ್ತಿದ್ದರು. ಮಧುಗಿರಿ-ಪಾವಗಡ ನಡುವಿನ ಕೆಶಿಪ್ ರಸ್ತೆಯ ಪಡಸಾಲಹಟ್ಟಿ ಬಸ್ ತಂಗುದಾಣದ ಬಲಿ ಬೈಕ್ ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಾಯಿ ಕಂಬಕ್ಕ ಸ್ಥಳದಲ್ಲೇ ಮೃತಪಟ್ಟಿದ್ದು ಮಧುಮಗ ಮಂಜುನಾಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.