ರಾಜ್ಯ

ಬಷೀರ್ ಕೊಲೆ ಯತ್ನ: ನಾಲ್ವರು ಆರೋಪಿಗಳ ತಪ್ಪೊಪ್ಪಿಗೆ; ಪೊಲೀಸ್ ಆಯುಕ್ತ ಟಿಆರ್ ಸುರೇಶ್

ಬಜರಂಗದಳದ ಕಾರ್ಯಕರ್ತ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ...

ಬಷೀರ್ ಕೊಲೆ ಯತ್ನ: ನಾಲ್ವರು ಆರೋಪಿಗಳ ತಪ್ಪೊಪ್ಪಿಗೆ; ಪೊಲೀಸ್ ಆಯುಕ್ತ ಟಿಆರ್ ಸುರೇಶ್
ಮಂಗಳೂರು ಪೊಲೀಸರು
Published On :
ಮಂಗಳೂರು: ಬಜರಂಗದಳದ ಕಾರ್ಯಕರ್ತ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿಆರ್ ಸುರೇಶ್ ತಿಳಿಸಿದ್ದಾರೆ. 
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತರು, ಪ್ರಕರಣ ಸಂಬಂಧ ಶ್ರೀಜಿತ್ ಪಿಕೆ, ಕಿಷನ್ ಪೂಜಾರಿ, ಧನುಶ್ ಪೂಜಾರಿ ಹಾಗೂ ಸಂದೇಶ್ ಕೋಟ್ಯಾನ್ ಎಂಬುವರನ್ನು ಬಂಧಿಸಲಾಗಿದ್ದು ಆರೋಪಿಗಳು ಕೇರಳ ಹಾಗೂ ಮಂಗಳೂರಿನ ಅಡ್ಯಾರ್ ನಿವಾಸಿಗಳು ಎಂದು ತಿಳಿಸಿದ್ದಾರೆ. 
ಆರೋಪಿ ಧನುಷ್ ಮನೆಯಲ್ಲಿದ್ದ ಆಯುಧಗಳನ್ನು ತೆಗೆದುಕೊಂಡು ಯಾರನ್ನಾದರೂ ಹತ್ಯೆ ಮಾಡಬೇಕೆಂದು ಸುರತ್ಕಲ್ ಕಡೆ ಹೊರಟಿದ್ದರು. ಈ ಸಂದರ್ಭದಲ್ಲಿ ಕೊಟ್ಟಾರ ಚೌಕಿಯಲ್ಲಿ ಸಿಕ್ಕ ಬಶೀರ್ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಗಳು ಒಪ್ಪಿಕೊಂಡಿರುವುದಾಗಿ ಟಿಆರ್ ಸುರೇಶ್ ತಿಳಿಸಿದ್ದಾರೆ. 
ಇನ್ನು ಗಂಭೀರವಾಗಿ ಗಾಯಗೊಂಡಿರುವ ಬಷೀರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸುಧಾರಿಸಿದೆ ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.