ಮಾರ್ಚ್ ವೇಳೆಗೆ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ: ಸಚಿವ ಮಲ್ಲಿಕಾರ್ಜುನ್
ರಾಜ್ಯದ ಎಲ್ಲಾ ವರ್ಗದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರ ಬರುವ ಮಾರ್ಚ್ ವೇಳೆಗೆ ....

Published On :
ದಾವಣಗೆರೆ: ರಾಜ್ಯದ ಎಲ್ಲಾ ವರ್ಗದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರ ಬರುವ ಮಾರ್ಚ್ ವೇಳೆಗೆ ಲ್ಯಾಪ್‍ಟಾಪ್‍ಗಳನ್ನು ವಿತರಿಸುವ ಯೋಜನೆ ಹಮ್ಮಿಕೊಂಡಿದೆ ಎಂದು ಕೃಷಿ ಮಾರುಕಟ್ಟೆ ಮತ್ತು ತೋಟಗಾರಿಕಾ ಖಾತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಅವರು ದಾವಣಗೆರೆಯಲ್ಲಿಂದು, ಪರಿಶಿಷ್ಟ ಜಾತಿ ಮತ್ತು ವರ್ಗದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಿಸಿ ಮಾತನಾಡಿ, ಜಿಲ್ಲೆಯಲ್ಲಿ ಈ ಸಾಲಿನಲ್ಲಿ 1 ಸಾವಿರದ 289 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಗುತ್ತಿದೆ, ಬರುವ ಮಾರ್ಚ್ ವೇಳೆಗೆ ಎಲ್ಲಾ ವರ್ಗದ ಒಂದು ಲಕ್ಷ 50 ಸಾವಿರ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರ ಎಲ್ಲಾ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಸಚಿವ ಮಲ್ಲಿಕಾರ್ಜುನ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


