ರಾಜ್ಯ

ರಾಜಕೀಯ ನಿಲ್ಲಿಸಿ, ಪೊಲೀಸರಿಗೆ ಮುಕ್ತ ಹಸ್ತ ನೀಡಿ: ಹಿರಿಯ ಪೊಲೀಸ್ ಅಧಿಕಾರಿಗಳು

ಕರಾವಳಿ ತೀರ ಪ್ರದೇಶಗಳಲ್ಲಿ ಕೋಮುಗಲಭೆಯಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ಪೊಲೀಸರ ಕಾರ್ಯವೈಖರಿ ಕುರಿತು ಪ್ರಶ್ನೆ ಏಳುತ್ತಿದ್ದು, ಕೋಮಗಲಭೆ ರಾಜಕೀಯವೇ ಪ್ರಮುಖ ಕಾರಣವೆಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ...

ರಾಜಕೀಯ ನಿಲ್ಲಿಸಿ, ಪೊಲೀಸರಿಗೆ ಮುಕ್ತ ಹಸ್ತ ನೀಡಿ: ಹಿರಿಯ ಪೊಲೀಸ್ ಅಧಿಕಾರಿಗಳು
ಸಂಗ್ರಹ ಚಿತ್ರ
Published On :
ಬೆಂಗಳೂರು: ಕರಾವಳಿ ತೀರ ಪ್ರದೇಶಗಳಲ್ಲಿ ಕೋಮುಗಲಭೆಯಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ಪೊಲೀಸರ ಕಾರ್ಯವೈಖರಿ ಕುರಿತು ಪ್ರಶ್ನೆ ಏಳುತ್ತಿದ್ದು, ಕೋಮಗಲಭೆ ರಾಜಕೀಯವೇ ಪ್ರಮುಖ ಕಾರಣವೆಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ. 
ರಾಜಕೀಯ ಗಣ್ಯರು ಮತಗಳಿಗಾಗಿ ರಾಜಕೀಯ ಮಾಡುತ್ತಿದ್ದು ಕರಾವಳಿ ತೀರ ಪ್ರದೇಶಗಳಲ್ಲಿ ಕೋಮುಗಲಭೆ ಹೆಚ್ಚಲು ಇದೇ ಪ್ರಮುಖ ಕಾರಣವಾಗಿದೆ ಎಂದು ನಿವೃತ್ತ ಹಾಗೂ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಹೇಳಿದ್ದಾರೆ. 
ಚುನಾವಣಾ ವರ್ಷ ಬರುತ್ತಿದ್ದಂತೆಯೇ ಇಂತಹ ಪ್ರದೇಶಗಳಲ್ಲಿ ಕೋಮುಗಲಭೆ ಎಷ್ಟರ ಮಟ್ಟಿಗಿರುತ್ತದೆ ಎಂಬುದುನ್ನು ಇತಿಹಾಸವೇ ಹೇಳುತ್ತದೆ. ರಾಜಕಿಯ ಮಧ್ಯಸ್ಥಿಕೆಗಳಿಲ್ಲದೆ ಕರಾವಳಿ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಮುಕ್ತ ಹಸ್ತಗಳನ್ನು ನೀಡಿದ್ದೇ ಆದರೆ, ತಿಂಗಳೊಳಗಾಗಿ ಪ್ರತೀಯೊಂದು ನಿಯಂತ್ರಣಕ್ಕೆ ಬರುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. 
ಕರ್ನಾಟಕ ಪೊಲೀಸ್ ಮಾಜಿ ಮುಖ್ಯಸ್ಥ ಎಂ.ಡಿ. ಸಿಂಗ್ ಮಾತನಾಡಿ, ಇದು ಕೇವಲ ಈಗಿನ ಕಥೆಯಲ್ಲ. ಸಾಕಷ್ಟು ವರ್ಷಗಳಿಂದಲೂ ಈ ರೀತಿಯ ಘಟನೆಗಳು ನಡೆಯುತ್ತಲೇ ಇದೆ. ರಾಜಕೀಯ ಲಾಭಗಳಿಗಾಗಿ ಅಸಹಿಷ್ಣುತೆಗಳು ಸೃಷ್ಟಿಯಾಗುತ್ತಲೇ ಇದೆ. ಕೋಮುಗಲಭೆಗೆ ರಾಜಕೀಯ ನಾಯಕರು ಪಾತ್ರಗಳನ್ನು ವಹಿಸುತ್ತಾರೆಂದು ತಿಳಿಸಿದ್ದಾರೆ. 
ರಾಜಕೀಯ ಗಣ್ಯರ ಮಧ್ಯಸ್ಥಿಕೆಗಳಿಲ್ಲದೆ, ಕಾನೂನಿನ ಚೌಕಟ್ಟಿನಲ್ಲಿ ಪೊಲೀಸರಿಗೆ ಮುಕ್ತ ಹಸ್ತವನ್ನು ನೀಡಿದ್ದೇ ಆದರೆ, ತಿಂಗಳೊಳಗಾಗಿ ಎಲ್ಲವೂ ನಿಯಂತ್ರಣಕ್ಕೆ ಬರುತ್ತದೆ. ಪೊಲೀಸರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಕೆಲಸವನ್ನು ಸರ್ಕಾರ ಕೂಡ ಮಾಡಬೇಕು. ಸ್ಥಳೀಯರು ಹಾಗೂ ಸ್ಥಳೀಯ ಜನರ ಸಂಸ್ಕೃತಿಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಚೆನ್ನಾಗಿ ತಿಳಿದಿರುತ್ತದೆ. ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಕೂಡ ಅವರಿಗೆ ತಿಳಿದಿರುತ್ತದೆ ಎಂದಿದ್ದಾರೆ. 
ಮತ್ತೊಬ್ಬ ಪೊಲೀಸ್ ಅಧಿಕಾರಿ ಎಸ್.ಟಿ. ರಮೇಶ್ ಅವರು ಮಾತನಾಡಿ, ಪೊಲೀಸರು ಪರಿಣಾಮಕಾರಿಯಾಗ ಕಾರ್ಯನಿರ್ವಹಿಸಿ ಆರೋಪಿಗಳಿಗೆ, ಹಂತಕರಿಗೆ ಶಿಕ್ಷೆ ನೀಡಬೇಕೆಂದು ಸಾರ್ವಜನಿಕರು ನಿರೀಕ್ಷಿಸುವುದು ಸಾಮಾನ್ಯ. ಆದರೆ, ರಾಜಕೀಯಗಳ ಮಧ್ಯೆ ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವುದು ಪೊಲೀಸರಿಗೆ ಕಷ್ಟಕರವಾಗಿರುತ್ತದೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ವೃತ್ತಿಪರ ಸವಾಲುಗಳನ್ನು ಎದುರಿಸಬೇಕಿರುತ್ತದೆ. ಕೆಲವೊಮ್ಮೆ ರಾಜಕೀಯ ವ್ಯಕ್ತಿಗಳು ಪೊಲೀಸರಿಗೆ ಅವರ ಕರ್ತವ್ಯದ ಬಗ್ಗೆ ಪಾಠ ಹೇಳಿಕೊಡುತ್ತಾರೆ. 
ಕೋಮು ಗಲಭೆ ಮೂಲಕ ರಾಜಕೀಯ ನಾಯಕರು ತಮ್ಮ ತಮ್ಮ ವೋಟ್ ಬ್ಯಾಂಕ್ ರಾಜಕೀಯವನ್ನು ಮಾಡುತ್ತಾರೆ. ರಾಜಕೀಯ ಸುಧಾರಣೆಗೊಂಡರೆ ಮಾತ್ರ ಪರಿಸ್ಥಿತಿಗಳು ನಿಯಂತ್ರಣಕ್ಕೆ ಬರುತ್ತವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.