ರಾಜ್ಯ

ಮಂಗಳೂರು ಹಲ್ಲೆ ಪ್ರಕರಣ: ಗಾಯಾಳು ಬಶೀರ್ ಚಿಕಿತ್ಸೆ ಫಲಿಸದೇ ಸಾವು

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಬೆನ್ನಲ್ಲೇ ಮಂಗಳೂರಿನ ಕುಲೂರು ಬಳಿ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 47 ವರ್ಷದ ಬಶೀರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು ಹಲ್ಲೆ ಪ್ರಕರಣ: ಗಾಯಾಳು ಬಶೀರ್ ಚಿಕಿತ್ಸೆ ಫಲಿಸದೇ ಸಾವು
ಮೃತ ಬಶೀರ್ (ಸಂಗ್ರಹ ಚಿತ್ರ)
Published On :
ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಬೆನ್ನಲ್ಲೇ ಮಂಗಳೂರಿನ ಕುಲೂರು ಬಳಿ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 47 ವರ್ಷದ ಬಶೀರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ತೀವ್ರ ಗಾಯಗೊಂಡಿದ್ದ ಬಶೀರ್ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 
ಇನ್ನು ಕಳೆದ ಜನವರಿ 3 ರಂದು ಮಂಗಳೂರಿನ ಕುಲೂರು ಸಮೀಪ ಕೊಟ್ಟಾರ ಚೌಕಿ ಬಳಿ ಅಪಚಿತ ವ್ಯಕ್ತಿಗಳು ಬಶೀರ್ ಅವರ ಮೇಲೆ ಹಲ್ಲೆ ಮಾಡಿದ್ದರು. ಚಾಕು, ತಲ್ವಾರ್ ಗಳಿಂದ ಬಶೀರ್ ಮೇಲೆ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಬಶೀರ್ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಬಶೀರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇನ್ನು ಇದೇ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಈ ಹಿಂದೆ ನಾಲ್ಕು ಜನರನ್ನು ಬಂಧಿಸಿದ್ದರು. ಈ ನಾಲ್ವರು ಮತೀಯ ಗಲಭೆಗಳಲ್ಲಿ ಈ ಹಿಂದೆ ಭಾಗಿಯಾಗಿದ್ದರು ಎಂಬ ಮಾಹಿತಿ ದೊರೆತಿದೆ. 
ಕಾಟಿಪಳ್ಳದಲ್ಲಿ ಇದೇ 3ರಂದು ದೀಪಕ್ ರಾವ್ ಹತ್ಯೆ ನಡೆದಿತ್ತು. ಅದೇ ದಿನ ರಾತ್ರಿ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಬಶೀರ್‌ ಮೇಲೆ ಹಲ್ಲೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.