ರಾಜ್ಯ

ಎಚ್ಚೆತ್ತ ಬಿಬಿಎಂಪಿ; ಅಗ್ನಿ ಸುರಕ್ಷತೆ ಅಳವಡಿಕೆ ಕಡ್ಡಾಯಗೊಳಿಸಿ ಸೂಚನೆ, ಪರಿಹಾರ ಘೋಷಣೆ

ಐದು ಜನರ ಸಾವಿಗೆ ಕಾರಣವಾದ ಕಲಾಸಿ ಪಾಳ್ಯದ ಕೈಲಾಶ್ ಬಾರ್ ಮತ್ತು ರೆಸ್ಟೋರೆಂಟ್ ಅಗ್ನಿ ದುರಂತ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಕೇವಲ ಬಾರ್ ಗಳು ಮಾತ್ರವಲ್ಲದೇ ನಗರದಲ್ಲಿರುವ ಎಲ್ಲ ಬಹುಮಹಡಿ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆ ಕಡ್ಡಾಯಗೊಳಿಸಿ ಸೂಚನೆ ನೀಡಿದೆ.

ಎಚ್ಚೆತ್ತ ಬಿಬಿಎಂಪಿ; ಅಗ್ನಿ ಸುರಕ್ಷತೆ ಅಳವಡಿಕೆ ಕಡ್ಡಾಯಗೊಳಿಸಿ ಸೂಚನೆ, ಪರಿಹಾರ ಘೋಷಣೆ
ಮೇಯರ್ ಸಂಪತ್ ರಾಜ್
Published On :
ಬೆಂಗಳೂರು: ಐದು ಜನರ ಸಾವಿಗೆ ಕಾರಣವಾದ ಕಲಾಸಿ ಪಾಳ್ಯದ ಕೈಲಾಶ್ ಬಾರ್ ಮತ್ತು ರೆಸ್ಟೋರೆಂಟ್ ಅಗ್ನಿ ದುರಂತ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಕೇವಲ ಬಾರ್ ಗಳು ಮಾತ್ರವಲ್ಲದೇ ನಗರದಲ್ಲಿರುವ  ಎಲ್ಲ ಬಹುಮಹಡಿ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆ ಕಡ್ಡಾಯಗೊಳಿಸಿ ಸೂಚನೆ ನೀಡಿದೆ.
ಈ ಸಂಬಂಧ ನಗರದಲ್ಲಿರುವ ಎಲ್ಲ ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದು, ಕಡ್ಡಾಯವಾಗಿ ಅಗ್ನಿ ಸುರಕ್ಷಿತ ವ್ಯವಸ್ಥೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ದುರಂತ ನಡೆದ  ಕಲಾಸಿಪಾಳ್ಯಕ್ಕೆ ಭೇಟಿ ನೀಡಿರುವ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಅವರು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ತಾವು ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದು,  ನಗರದಲ್ಲಿರುವ ಎಲ್ಲ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದು ಕಡ್ಡಾಯಗೊಳಿಸಿ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅಂತೆಯೇ ಅಗ್ನಿ ಸುರಕ್ಷತೆ ಅಳವಡಿಸಿಕೊಳ್ಳದ ನಗರದ 8 ಬಾರ್ ಗಳಿಗೆ ನೋಟಿಸ್ ಕೂಡ ನೀಡಲಾಗಿದೆ ಎಂದು ಹೇಳಿದರು. ಅಂತೆಯೇ ಸಮೀಪದಲ್ಲಿರುವ ವಾಣಿಜ್ಯ ಕಟ್ಟಡಗಳಿಗೆ ಭೇಟಿ ನೀಡಿರುವ ಮೇಯರ್ ಸಂಪತ್ ರಾಜ್ ಅವರು  ಅಲ್ಲಿನ ಪರಿಸ್ಥಿತಿ ಕುರಿತು ಅವಲೋಕನ ನಡೆಸಿದ್ದಾರೆ.
ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ
ಇದೇ ವೇಳೆ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ನೀಡುವುದಾಗಿ ಮೇಯರ್ ಸಂಪತ್ ರಾಜ್ ಘೋಷಣೆ ಮಾಡಿದ್ದಾರೆ. ಕೈಲಾಶ್ ಬಾರ್ ನಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ  ಐದು ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.