ಚಿತ್ರದುರ್ಗದಲ್ಲಿ ಜವರಾಯನ ಅಟ್ಟಹಾಸ; ಲಾರಿ-ಕ್ರೂಸರ್ ಡಿಕ್ಕಿಯಾಗಿ 5 ಸಾವು
ಇತ್ತ ಬೆಂಗಳೂರಿನಲ್ಲಿ ಬಾರ್ ಆಗ್ನಿ ದುರಂತ ಪ್ರಕರಣದಲ್ಲಿ 5 ಮಂದಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಅತ್ತ ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಐದು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

Published On :
ಚಿತ್ರದುರ್ಗ: ಇತ್ತ ಬೆಂಗಳೂರಿನಲ್ಲಿ ಬಾರ್ ಆಗ್ನಿ ದುರಂತ ಪ್ರಕರಣದಲ್ಲಿ 5 ಮಂದಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಅತ್ತ ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಐದು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೂಲಗಳ ಪ್ರಕಾರ ಇಂದು ಮುಂಜಾನೆ ಚಿತ್ರದುರ್ಗದ ಸಿಬಾರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ಸಂಭವಿಸಿದ್ದು, ಚಲಿಸುತ್ತಿದ್ದ ಲಾರಿಗೆ ಕ್ರೂಸರ್ ಗಾಡಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರೆಲ್ಲರೂ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿವಲಿಂಗ, ಸಿದ್ದಾರ್ಥ್, ವಿನೋಧ, ಶಿವಲಿಂಗ ಕೊಕ್ಕನೂರು, ರಾಕೇಶ್ ಎಂದು ತಿಳಿದು ಬಂದಿದೆ.
ಕ್ರೂಸರ್ ವಾಹನದಲ್ಲಿದ್ದವರು ಮೈಸೂರು ಪ್ರವಾಸ ಮುಗಿಸಿ ಬೆಳಗಾವಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಶ್ರೀನಾಥ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


