ವಿಧಾನಸಭಾ ಚುನಾವಣೆ: ಅಕ್ರಮ ಹಣ ವರ್ಗಾವಣೆ ವಿರುದ್ಧ ಆಯೋಗ ಹದ್ದಿನ ಕಣ್ಣು
"ಚುನಾವಣೆಯಲ್ಲಿ ಹಣದ ದುರ್ಬಳಕೆ ತಡೆಯಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತದೆ.

Published On :
ಬೆಂಗಳೂರು: "ಚುನಾವಣೆಯಲ್ಲಿ ಹಣದ ದುರ್ಬಳಕೆ ತಡೆಯಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತದೆ. ನಗದು ಹಣ ಹಂಚಿಕೆ, ಟೋಕನ್, ಕೂಪನ್ ಗಳ ಹಂಚುವಿಕೆಗೆ ಕಡಿವಾಣ ಹಾಕಲಾಗುವುದು. ಯಾವುದೇ ಬಗೆಯಲ್ಲಿ ಮತದಾರರಿಗೆ ಆಮಿಷಗಳನ್ನು ಒಡ್ಡುವವರ ವಿರುದ್ಧ ಆಯೋಗ ಕಠಿಣ ಕ್ರಮ ಕೈಗೊಳ್ಳುತ್ತದೆ" ಚುನಾವಣಾ ಆಯೋಗದ ಉಪ ಆಯುಕ್ತ ಉಮೇಶ್ ಸಿನ್ಹಾ ಹೇಳಿದ್ದಾರೆ.
ಚುನಾವಣೆ ಸಿದ್ಧತೆ ಬಗ್ಗೆ ರಾಜ್ಯದ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಈ ವಿಚಾರ ತಿಳಿಸಿದ್ದಾರೆ.
"ಆದಾಯ ತೆರಿಗೆ ಇಲಾಖೆ ನೆರವು ಪಡೆದು ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕೇಂದ್ರಗಳನ್ನು ಪ್ರಾರಂಭಿಸಲಿದ್ದು ವಿಮಾನ ನಿಲ್ದಾಣದ ಮೂಲಕ ನಡೆಯುವ ಹಣದ ವರ್ಗಾವಣೆ ವಿಚಾರದಲ್ಲಿ ಕ್ರಮ ಜರುಗಿಸಲು ಇದರಿಂದ ಅನುಕೂಲವಾಗಲಿದೆ.ಪ್ರತಿ ವಿಧಾನಸಭೆ ಕ್ಷೇತ್ರಗಳಲ್ಲಿ ಆರು ವಿಶೇಷ ತಂಡಗಳನ್ನು ನೇಮಕ ಮಾಡಲಿದ್ದು ರಾಜ್ಯದ ಗಡಿ ಭಾಗಗಳಲ್ಲಿ ಹಣ, ಹೆಂಡಗಳ ಹಂಚಿಕೆ, ಸಾಗಾಟದ ವಿವರ ಪರಿಶೀಲನೆಗೆ ಆದಾಯ ತೆರಿಗೆ ಇಲಾಖೆ ನೆರವು ಪಡೆಯಲಾಗುತ್ತದೆ.
"ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಈಗಿರುವ ಜನವರಿ 12ರ ಅಂತಿಮ ಗಡುವನ್ನು ವಿಸ್ತರಿಸಲು ಆಯೋಗ ತೀರ್ಮಾನಿಸಿದ್ದು ಈ ಕುರಿತಂತೆ ಅನೇಕ ಮನವಿಗಳು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದ್ದೇವೆಂದು ಸಿನ್ಹಾ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಬಹುತೇಕ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಯಲಿದ್ದು ಚುನಾವಣೆ ದಿನಾಂಕವಿನ್ನೂ ನಿಗದಿಯಾಗಿಲ್ಲ. ಮತದಾನವು ಒಂದೇ ಹಂತದಲ್ಲಿ ನಡೆಯಲಿದೆಯೆ, ಎರಡು ಹಂತದಲ್ಲಿ ನಡೆಯಲಿದೆಯೆ ಎನ್ನುವುದರ ಬಗೆಗೆ ಸಿನ್ಹಾ ಯಾವ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಈ ನಡುವೆ ಚುನಾವಣೆ ಪ್ರಕ್ರಿಯೆ ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ ಎನ್ನುವ ಮಾಹಿತಿಯನ್ನು ಆಯೋಗ ತಿಳಿಸಿದ್ದು ಮತದಾರರ ಪಟ್ಟಿಗೆ ಹೆಸರು ಸೇರಿಸುವುದರಿಂದ ಹಿಡಿದು ಮತ ಎಣಿಕೆಯವರೆಗೆ ಎಲ್ಲ ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು ಸಿನ್ಹಾ ಹೇಳಿದ್ದಾರೆ.
ಎಸ್ ಎಂಎಸ್ ಮೂಲಕ ನಿಮ್ಮ ಮತದಾನದ ಬೂತ್ ಮಾಹಿತಿ ಪಡೆಯಿರಿ
ವಿಧಾನಸಭಾ ಕ್ಷೇತ್ರ, ಪೋಲಿಸ್ ಸ್ಟೇಷನ್ ವಿಳಾಸ ಮತ್ತು ಇತರೆ ವಿವರಗಳನ್ನು ತಿಳಿದುಕೊಳ್ಳಲು, ಮತದಾರರು '‘KAEPIC (ಸ್ಪೇಸ್) ಮತದಾರರ ಗುರುತಿನ ಚೀಟಿ ಸಂಖ್ಯೆ" ಟೈಪ್ ಮಾಡುವ ಮೂಲಕ 9731979899 ಕ್ಕೆ ಎಸ್ಎಂಎಸ್ ಕಳುಹಿಸಬಹುದು. ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಉಪಸ್ಥಿತಿಯಲ್ಲಿ ಸಿನ್ಹಾ ಈ ಸೇವೆಯನ್ನು ಪ್ರಾರಂಭಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Election Commissionಚುನಾವಣಾ ಆಯೋಗಮದ್ಯliquordistribution of cashDeputy Election Commissioner Umesh Sinhaನಗದು ಹಂಚಿಕೆಉಪ ಚುನಾವಣಾ ಆಯುಕ್ತ ಉಮೇಶ್ ಸಿನ್ಹಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


