ಹಾಸನ ಬಳಿ ಭೀಕರ ಬಸ್ ಅಪಘಾತ; 8 ಮಂದಿ ಪ್ರಯಾಣಿಕರು ಸಾವು
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಶನಿವಾರ ಬೆಳಗ್ಗೆ ಶಾಂತಿಗ್ರಾಮ ...

Published On :
ಹಾಸನ: ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕನ ನಿಯಂತ್ರಣ ತಪ್ಪಿ ಶನಿವಾರ ನಸುಕಿನ ಜಾವ 3.30ರ ಸುಮಾರಿಗೆ ಹಾಸನ ತಾಲ್ಲೂಕಿನ ಶಾಂತಿಗ್ರಾಮ ಬಳಿ ಅಪಘಾತಕ್ಕೀಡಾಗಿ 8 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.ರಾಷ್ಟ್ರೀಯ ಹೆದ್ದಾರಿ 7ರ ಕೃಷಿ ಕಾಲೇಜು ಬಳಿ ದುರ್ಘಟನೆ ಸಂಭವಿಸಿದೆ.ಬಸ್ಸು ಪಕ್ಕದ ಹಳ್ಳಕ್ಕೆ ಬಿದ್ದಿತು.
ಇತರ ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹಾಸನ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಪ್ರಯಾಣಿಕರೆಲ್ಲರು ನಿದ್ದೆಯಲ್ಲಿದ್ದರು. ಬಸ್ಸು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿತ್ತು. ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರಿದ್ದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಐರಾವತ ಬಸ್ ಆಗಿದೆ.ಹಾಸನ ಜಿಲ್ಲಾಸ್ಪತ್ರೆಯಲ್ಲಿ ಗಾಯಗೊಂಡವರು ಮತ್ತು ಅವರ ಬಂಧು ಬಳಗದವರ ಆಕ್ರಂದನ ಮುಗಿಲು ಮುಟ್ಟಿದೆ.
ಅಪಘಾತದಲ್ಲಿ ಬಸ್ ಚಾಲಕ ಲಕ್ಷ್ಮಣ್ ಮತ್ತು ಕಂಡಕ್ಟರ್ ಶಿವಪ್ಪ ಛಲವಾದಿ ಸೇರಿದಂತೆ ಇತರ 6 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಜಿಲ್ಲಾಸ್ಪತ್ರೆಗೆ ಸ್ವಲ್ಪ ಹೊತ್ತಿಗೆ ಮುಂಚೆ ಪೊಲೀಸ್ ವರಿಷ್ಠರು ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


