ರಾಜ್ಯ

ಹಾಸನ ಬಸ್ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 3 ಲಕ್ಷ ರು. ಪರಿಹಾರ ಘೋಷಣೆ

ಹಾಸನದ ಶಾಂತಿಗ್ರಾಮದ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರು.ಗಳನ್ನು ಘೋಷಣೆ ಮಾಡಿದೆ.

ಹಾಸನ ಬಸ್ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 3 ಲಕ್ಷ ರು. ಪರಿಹಾರ ಘೋಷಣೆ
ಅಪಘಾತಕ್ಕೀಡಾದ ಐರಾವತ ಬಸ್
Published On :
ಬೆಂಗಳೂರು: ಹಾಸನದ ಶಾಂತಿಗ್ರಾಮದ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 3  ಲಕ್ಷ ರು.ಗಳನ್ನು ಘೋಷಣೆ ಮಾಡಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜ್ಯ ಸಾರಿಗೆ ಸಚಿವ ಎಚ್ ಎಂ ರೇವಣ್ಣ ಅವರು, ಮೃತರ ಕುಟುಂಬಕ್ಕೆ ಸರ್ಕಾರ ತಲಾ ಮೂರು ಲಕ್ಷ ಪರಿಹಾರ ನೀಡಲಿದೆ ಮತ್ತು ಪ್ರಸ್ತುತ ಗಾಯಗೊಂಡಿರುವ ಎಲ್ಲ ಪ್ರಯಾಣಿಕರ ಚಿಕಿತ್ಸೆ  ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು. ಅಂತೆಯೇ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿಯೂ ರೇವಣ್ಣ ಮಾಹಿತಿ ನೀಡಿದ್ದರೆ.
ಇನ್ನು ಘಟನಾ ಸ್ಥಳಕ್ಕೆ ಸ್ಥಳೀಯ ಕೆಎಸ್ ಆರ್ ಟಿಸಿ ಅಧಿಕಾರಿಗಳು ಭೇಟಿ ನೀಡಿದ್ದು, ಅಪಘಾತದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ಪ್ರತ್ಯಕ್ಷ ದರ್ಶಿಗಳು ಹಾಗೂ ಗಾಯಗೊಂಡ ಪ್ರಯಾಣಿಕರಿಂದ ಮಾಹಿತಿ ಸಂಗ್ರಹಿಸುವುದಾಗಿ  ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿಯ ಐರಾವತ ಬಸ್ ಇಂದು ಮುಂಜಾನೆ 3.30ರ ಸುಮಾರಿನಲ್ಲಿ ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿ 7ರ ಬಳಿ ಇರುವ ಕೃಷಿ ಕಾಲೇಜು ಬಳಿ  ಅಪಘಾತಕ್ಕೀಡಾಗಿತ್ತು. ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ್ದರಿಂದ ಬಸ್ ಚಾಲಕ ಲಕ್ಷ್ಮಣ್ ಮತ್ತು ಕಂಡಕ್ಟರ್ ಶಿವಪ್ಪ ಛಲವಾದಿ ಸೇರಿದಂತೆ ಇತರ 8 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.