ಕೋಮು ದ್ವೇಷಕ್ಕೆ ಬಲಿಯಾದ ದೀಪಕ್, ಬಶೀರ್ ಕುಟುಂಬಗಳಿಗೆ ಸಾಂತ್ವನ ಹೇಳಿದ ಗೃಹ ಸಚಿವ
ಕೋಮು ದ್ವೇಷಕ್ಕೆ ಬಲಿಯಾದ ದೀಪಕ್ ರಾವ್ ಹಾಗೂ ಅಬ್ದುಲ್ ಬಶೀರ್ ಅವರ ಮನೆಗಳಿಗೆ ಶುಕ್ರವಾರ ಭೇಟಿ ನೀಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು, ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ...

Published On :
ಮಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ದೀಪಕ್ ರಾವ್ ಹಾಗೂ ಅಬ್ದುಲ್ ಬಶೀರ್ ಅವರ ಮನೆಗಳಿಗೆ ಶುಕ್ರವಾರ ಭೇಟಿ ನೀಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು, ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಉಡುಪಿ ಜಿಲ್ಲೆಗೆ ತೆರಳಿದ್ದ ರಾಮಲಿಂಗಾ ರೆಡ್ಡಿಯವರು ವಾಪಸ್ಸು ಬರುವ ಸಂದರ್ಭದಲ್ಲಿ ಕಾಟಿಪಳ್ಳಕ್ಕೆ ತೆರಳಿದ್ದಾರೆ. ಬಳಿಕ ದೀಪಕ್ ರಾವ್ ಅವರ ತಾಯಿ ಪ್ರೇಮಲತಾ ಮತ್ತು ತಮ್ಮ ಸತೀಶ್ ರಾವ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಬಳಿಕ ಆಕಾಶಭವನಕ್ಕೆ ಬಂದ ಅವರ ಬಶೀರ್ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ, ಬಳಿಕ ದಕ್ಷಿಣ ಕನ್ನಡ ಜಿಲ್ಲೆ. ಉತ್ತರ ಕನ್ನಡ, ಉಡುಪಿ, ಮತ್ತು ಚಿಕ್ಕಮಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಕರಣಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಗಳ ಸಂಬಂಧ ಎರಡು ತನಿಖಾ ತಂಡಗಳನ್ನು ರಚನೆ ಮಾಡಲಾಗಿದೆ. ದೀಪಕ್ ಹಾಗೂ ಬಶೀರ್ ಹತ್ಯೆ ಪ್ರಕರಣವನ್ನು ಬುಡದಿಂದ ತನಿಖೆ ನಡೆಸಲಿದ್ದಾರೆ. ಕೊಲೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಫೆಡರೇಷನ್ ಅಧ್ಯಕ್ಷ ಮತ್ತು ಮಾಜಿ ಮೇಯರ್ ಕೆ. ಅಶ್ರಫ್ ಅವರೂ ಕೂಡ ದೀಪಕ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ದೀಪಕ್ ತಾಯಿ ಪ್ರೇಮ ಅವರೊಂದಿಗೆ ಮುಸ್ಲಿಂ ಸಮುದಾಯವಿದೆ. ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇವೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


