ಕೆಎಸ್ಆರ್ಟಿಸಿ ಹಳೇ ಬಸ್‌ಗಳಲ್ಲಿ ಆ್ಯಂಬುಲೆನ್ಸ್ ಸೇವೆ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ)ಯು ತನ್ನ ಬಳಿ ಇರುವ ಗುಜರಿ ಬಸ್ ಗಳನ್ನು ಮುಂದಿನ ದಿನಗಳಲ್ಲಿ ಆ್ಯಂಬುಲೆನ್ಸ್ ಆಗಿ ಬದಲಾಯಿಸಿ ಪ್ರಯಾಣಿಕರ ಸೇವೆಗೆ ಒದಗಿಸಲಿದೆ...

Published On :
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ)ಯು ತನ್ನ ಬಳಿ ಇರುವ ಗುಜರಿ ಬಸ್ ಗಳನ್ನು ಮುಂದಿನ ದಿನಗಳಲ್ಲಿ ಆ್ಯಂಬುಲೆನ್ಸ್ ಆಗಿ ಬದಲಾಯಿಸಿ ಪ್ರಯಾಣಿಕರ ಸೇವೆಗೆ ಒದಗಿಸಲಿದೆ.
ಅಪಘಾತಕ್ಕೀಡಾದ ಗಾಯಾಳುವಿಗೆ ಗೋಲ್ಡನ್ ಅವರ್ ನಲ್ಲಿ ಚಿಕಿತ್ಸೆ ನೀಡುವ ಆ್ಯಂಬುಲೆನ್ಸ್ ರೂಪದಲ್ಲಿ ಸೇವೆ ಬದಗಿಸಲು ಸಾರಿಗೆ ಸಂಸ್ಥೆ ಚಿಂತನೆ ನಡೆಸಿದೆ. ನಿಗದಿತ ದೂರ ಕ್ರಮಿಸಿದ, ಈಗಲೂ ಚಾಲ್ತಿಯಲ್ಲಿರುವ ಸಾಕಷ್ಟು ಬಸ್ ಗಳು ಕೆಎಸ್ಆರ್ಟಿಸಿ ಬಳಿ ಇವೆ. ಇವುಗಳನ್ನು ಬಸ್ ಆ್ಯಂಬುಲೆನ್ಸ್ ಆಗಿ ಪರಿವರ್ತಿಸಬಹುದು.
ನಿಗದಿತ ದೂರ ಕ್ರಮಿಸಿದ ಬಸ್ ಗಳಲ್ಲೂ ಎರಡು ಪ್ರಕಾರಗಳಿವೆ. ಆ ಪೈಕಿ ಸುಸ್ಥಿತಿಯಲ್ಲಿಲ್ಲದ ಬಸ್ ಗಳ ಬಿಡಿ ಭಾಗಗಳನ್ನು ತೆಗೆದುಕೊಂಡು ಸುಸ್ಥಿತಿಯಲ್ಲಿರುವ ಬಸ್ ಗಳಿಗೆ ಜೋಡಿಸಲಾಗುತ್ತದೆ. ಬಸ್ ಆ್ಯಂಬುಲೆನ್ಸ್ ಗಳನ್ನಾಗಿ ಪರಿವರ್ತಿಸಲು ಕೆಎಸ್ಆರ್ಟಿಸಿಯಲ್ಲಿರುವ ರನ್ನರ್ ಸ್ಕ್ರಾಪ್ ಬಸ್ ಗಳನ್ನು ಬಳಸಿಕೊಳ್ಳಲು ಚಿಂತನೆ ನಡೆಸಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್ ಆರ್ ಉಮಾಶಂಕರ್ ತಿಳಿಸಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಗಳನ್ನು ಆ್ಯಂಬುಲೆನ್ಸ್ ಆಗಿ ಪರಿವರ್ತಿಸಲು 3ರಿಂದ 4 ಲಕ್ಷ ರುಪಾಯಿ ಖರ್ಚಾಗುತ್ತದೆ. ಹೀಗೆ ಬಸ್ ಆ್ಯಂಬುಲೆನ್ಸ್ ಸಾಕಷ್ಟು ಸ್ಥಳಾವಕಾಶ ಇರುವುದರಿಂದ ಒಮ್ಮೆ 20 ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗಳಿಗೆ ಸಾಗಿಸಬಹುದು.
ಕೆಎಸ್ಆರ್ಟಿಸಿ ವ್ಯಾಪ್ತಿಯ 16 ಜಿಲ್ಲೆಗಳು ಸೇರಿದಂತೆ ರಾಜ್ಯ ವಿವಿಧೆಡೆ ಬಸ್ ಆ್ಯಂಬುಲೆನ್ಸ್ ಪರಿಚಯಿಸಲು ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ಎಚ್ ಎಂ ರೇವಣ್ಣ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


