ಸಿಜೆಐ ವಿರುದ್ದ ನ್ಯಾಯಾಧೀಶರ ಅಸಮಾಧಾನ: ಸತ್ಯ ಬಹಿರಂಗಗೊಳ್ಳಬೇಕು- ಕಾನೂನು ಸಚಿವ
ಸುಪ್ರೀಂಕೋರ್ಟ್ ನ್ಯಾಯಾಧೀಶರು ಸುದ್ದಿಗೋಷ್ಠಿ ನಡೆಸಿದ್ದಾರೆಂದರೆ ಅದರ ಹಿಂದೆ ಪ್ರಬಲವಾದ ಕಾರಣವಿರುತ್ತದೆ. ಸತ್ಯ ಬಹಿರಂಗಗೊಳ್ಳಬೇಕಿದೆ ಎಂದು ರಾಜ್ಯ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಶುಕ್ರವಾರ ಹೇಳಿದ್ದಾರೆ...

Published On :
ಬೆಂಗಳೂರು: ಸುಪ್ರೀಂಕೋರ್ಟ್ ನ್ಯಾಯಾಧೀಶರು ಸುದ್ದಿಗೋಷ್ಠಿ ನಡೆಸಿದ್ದಾರೆಂದರೆ ಅದರ ಹಿಂದೆ ಪ್ರಬಲವಾದ ಕಾರಣವಿರುತ್ತದೆ. ಸತ್ಯ ಬಹಿರಂಗಗೊಳ್ಳಬೇಕಿದೆ ಎಂದು ರಾಜ್ಯ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಶುಕ್ರವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಸುಪ್ರೀಂಕೋರ್ಟ್'ನ ನ್ಯಾಯಾಧೀಶರು ಸುದ್ದಿಗೋಷ್ಠಿ ನಡೆಸಿ ನ್ಯಾಯಾಲಯದ ಆಡಳಿತ ವ್ಯವಸ್ಥೆ ಬಗ್ಗೆ ಅಸಮಾಧಾನವನ್ನು ಹೊರಹಾಕಾದಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ವ್ಯಕ್ತಪಡಿಸಿರುವುದರ ಹಿಂದೆ ಪ್ರಬಲವಾದ ಕಾರಣವಿರುತ್ತದೆ ಎಂದು ಹೇಳಿದ್ದಾರೆ.
ನ್ಯಾಯಾಧೀಶರ ನಡೆ ಕುರಿತಂತೆ ನಿಲುವು ತೆಗೆದುಕೊಳ್ಳಲು ಇದೇ ವೇಳೆ ನಿರಾಕರಿಸಿರುವ ಅವರು, ಮೊದಲು ಸತ್ಯಾಂಶ ಬಹಿರಂಗಗೊಳ್ಳಬೇಕು. ಬಳಿಕವಷ್ಟೇ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಎಂದು ತಿಳಿಸಿದ್ದಾರೆ.
ಇದರಂತೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿ, ರಾಜಕಾರಣಿಗಳು ಹಾಗೂ ಅಧಿಕಾರಿಗಳ ನಡುವೆ ಉಂಟಾಗುತ್ತಿದ್ದ ಕಲಹಗಳು ಇದೀಗ ನ್ಯಾಯಾಂಗ ಆಲಯಕ್ಕೂ ತಲುಪಿದೆ. ಪ್ರಸ್ತುತ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಬೇಕು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್Karnatakaಕರ್ನಾಟಕpress conferenceಸುದ್ದಿಗೋಷ್ಠಿjudgesನ್ಯಾಯಾಧೀಶರುಟಿಬಿ. ಜಯಚಂದ್ರTB. Jayachandr
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


