ಗವಿ ಗಂಗಾಧರೇಶ್ವರನ ಪಾದ ಸ್ಪರ್ಶಿಸಿದ ಸೂರ್ಯದೇವ!
ಮಕರ ಸಂಕ್ರಮಣದ ದಿನವಾದ ಇಂದು ಸಂಜೆ ಗವಿಪುರಂನ ಗವಿ ಗಂಗಾಧರೇಶ್ವರ ದೇಗುಲದ ಶಿವಲಿಂಗವನ್ನು ಸೂರ್ಯದೇವ ಸ್ಪರ್ಶಿಸಿದ ಅಪೂರ್ವ ಕ್ಷಣವನ್ನು...

Published On :
ಬೆಂಗಳೂರು: ಮಕರ ಸಂಕ್ರಮಣದ ದಿನವಾದ ಇಂದು ಸಂಜೆ ಗವಿಪುರಂನ ಗವಿ ಗಂಗಾಧರೇಶ್ವರ ದೇಗುಲದ ಶಿವಲಿಂಗವನ್ನು ಸೂರ್ಯದೇವ ಸ್ಪರ್ಶಿಸಿದ ಅಪೂರ್ವ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡರು.
ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಬೆಳಕಿನ ಚಮತ್ಕಾರವೊಂದು ಕಣ್ಣಿಗೆ ಹಬ್ಬವಾಗುತ್ತದೆ. ಶಿವನೂ ಸೂರ್ಯನೂ ಒಂದೇ ಕಡೆ ಮುಖಾಮುಖಿಯಾಗುವ ಅಪೂರ್ವ ಕ್ಷಣ. ಸೂರ್ಯನು ಗಂಗಾಧರನ ಪಾದ ಸ್ಫರ್ಶಿಸಿ ಪಥ ಬದಲಿಸುತ್ತಾನೆ ಎಂಬ ನಂಬಿಕೆ ಭಕ್ತರಲ್ಲಿದೆ.
ಮಕರ ಸಂಕ್ರಾಂತ್ರಿಯ ಮೊದಲು 10 ದಿನ ಸೂರ್ಯ ದಕ್ಷಿಣ ಪಥದಿಂದ ಉತ್ತರ ಪಥಕ್ಕೆ ಚಲಿಸುವ ಎಲ್ಲಾ ಲಕ್ಷಣಗಳು ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಕಾಣಿಸುತ್ತದೆ. ಆದರೆ ಮಕರ ಸಂಕ್ರಾಂತಿಯಂದು ಸೂರ್ಯಸ್ತ ಸಮಯದಲ್ಲಿ ಸೂರ್ಯನ ಕಿರಣಗಳು ದೇವಸ್ಥಾನದ ದಕ್ಷಿಣ ಕಿಟಕಿಯ ಮೂಲಕ ಹಾದು. ನಂದಿಯ ಕೋಡುಗಳ ಮಧ್ಯಭಾಗದಿಂದ ಶಿವನ ಪಾದವನ್ನು ನೇರವಾಗಿ ಸ್ಪರ್ಶಿಸುವ ಮೂಲಕ ಸಂಪೂರ್ಣವಾಗಿ ಪಥ ಬದಲಿಸುವುದನ್ನು ಕಾಣಬಹುದು.
ಅಪಾರ ಸಂಖ್ಯೆಯಲ್ಲಿ ಭಕ್ತರು ಗವಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಶಿವಲಿಂಗGavi Gangadhareshwara templeShiva LingaSun Raysಸೂರ್ಯ ಕಿರಣಗವಿ ಗಂಗಾಧರೇಶ್ವರ ದೇವಸ್ತಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


