ಹಾಸನ: ಮನೆ ಮುಂದೆ ನಿಂತಿದ್ದ ಬಾಲಕನ ಹೊತ್ತೊಯ್ದ ಒಂಟಿ ಸಲಗ, ಮೃತನ ಶವ ಪತ್ತೆ
ಮನೆ ಮುಂದೆ ನಿಂತಿದ್ದ ಪುಟ್ಟ ಬಾಲಕನನ್ನು ಒಂಟಿ ಸಲಗವೊಂದು ಹೊತ್ತೊಯ್ದು ಕೊಂದು ಹಾಕಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾಗಿದೆ.

Published On :
ಹಾಸನ: ಮನೆ ಮುಂದೆ ನಿಂತಿದ್ದ ಪುಟ್ಟ ಬಾಲಕನನ್ನು ಒಂಟಿ ಸಲಗವೊಂದು ಹೊತ್ತೊಯ್ದು ಕೊಂದು ಹಾಕಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾಗಿದೆ.
ಮೃತ ಬಾಲಕನನ್ನು 14 ವರ್ಷದ ಭರತ್ ಎಂದು ಗುರುತಿಸಲಾಗಿದ್ದು, ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೊಡಗವತ್ತವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭರತ್ ತಂದೆ ಇಲ್ಲದ ತಬ್ಬಲಿಯಾಗಿದ್ದು, ಆತನ ತಾಯಿ ಇತ್ತೀಚೆಗಷ್ಟೇ ಸಂಕ್ರಾಂತಿ ಹಬ್ಬದ ನಿಮಿತ್ತ ಭರತ್ ಅಜ್ಜಿ ಜಯಮ್ಮನ ಮನೆಗೆ ಬಂದಿದ್ದರಂತೆ.
ಇಂದು ಮನೆ ಮುಂದೆ ಆಟವಾಡುತ್ತಾ ನಿಂತಿದ್ದ ಬಾಲಕ ಭರತ್ ನನ್ನು ಒಂಟಿಸಲಗ ಹೊತ್ತೊಯ್ದಿದೆ. ಮನೆ ಮುಂದೆ ಆಡುತ್ತಿದ್ದ ಬಾಲಕ ಕಾಣದೇ ಇದ್ದುದರಿಂದ ಆತಂಕಕ್ಕೀಡಾದ ತಾಯಿ ಮತ್ತು ಅಜ್ಜಿ ಜಯಮ್ಮ ಬಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮೃತ ಭರತ್ ನ ಮೃತದೇಹ ಪತ್ತೆಯಾಗಿದೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿರುವ ಸ್ಥಳೀಯ ಪೊಲೀಸರು ಹಾಗೂ ಅರಣ್ಯಇಲಾಖೆ ಸಿಬ್ಬಂದಿ ಆನೆಗಾಗಿ ಕಾರ್ಯಾಚರಣೆ ರೂಪಿಸಿದ್ದಾರೆ. ಪ್ರಸ್ತುತ ಮೃತ ಬಾಲಕ ಭರತ್ ನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


