ರಾಜ್ಯ

ಬಶೀರ್ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಮತ್ತಿಬ್ಬರ ಬಂಧನ

ಬಶೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ...

ಬಶೀರ್ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಮತ್ತಿಬ್ಬರ ಬಂಧನ
ಸಾಂದರ್ಭಿಕ ಚಿತ್ರ
Published On :
ಮಂಗಳೂರು: ಬಶೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 
ಕಾಸಾರಗೋಡು ನಿವಾಸಿಗಳಾಗಿರುವ ಲಥೀಶ್ (24), ಪುಷ್ಪರಾಜ್ (23) ಬಂಧಿತ ಆರೋಪಿಗಳಾಗಿದ್ದಾರೆ. 
ಆರೋಪಿಗಳ ಬಂಧನ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಎಸಿಪಿ ವ್ಯಾಲೆಂಟೈನ್ ಡಿಸೋಜಾ ಅವರು, ಲಥೀಶ್ ಹಾಗೂ ಪುಷ್ಪರಾಜ್ ಇಬ್ಬರೂ ಬಶೀರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಪ್ರಕರಣ ಕುರಿತು ಪೂರ್ಣ ಪ್ರಮಾಣದ ತನಿಖೆ ನಡೆದ ಬಳಿಕವಷ್ಟೇ ಸತ್ಯಾಂಶ ಬಹಿರಂಗಗೊಳ್ಳಲಿದೆ ಎಂದು ಹೇಳಿದ್ದಾರೆ. 
ಈ ಹಿಂದೆ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿತ್ತು. ಇದೀಗ ಮತ್ತಿಬ್ಬರನ್ನು ಬಂಧನಕ್ಕೊಳಪಡಿಸಿರುವ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ಒಟ್ಟು ಆರು ಮಂದಿ ಬಂಧನಕ್ಕೊಳಗಾಗಿದ್ದಾರೆ. 
ದೀಪಕ್ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ
ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 
ಕಾಟಿಪಳ್ಳದ ನಿವಾಸಿಗಳಾಗಿರುವ ಅಬ್ದುಲ್ ಅಜೀಜ್ (42) ಹಾಗೂ ಅಬ್ದುಲ್ ಅಜೀಮ್ (34) ಬಂಧಿತ ಆರೋಪಿಗಳಾಗಿದ್ದಾರೆ. 
ಜ.3 ರಂದು ಕಾಟಿಪಳ್ಳದಲ್ಲಿ ದೀಪಕ್ ರಾವ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಸಂಬಂಧ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ದುಷ್ಕರ್ಮಿಗಳ ಬೆನ್ನಟ್ಟಿ, ಹತ್ಯೆಯಾದ ದಿನವೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.