ರಾಜ್ಯ

ಹೊಸ ವರ್ಷದ ಮುನ್ನಾ ದಿನ ದುಷ್ಕರ್ಮಿಗಳ ಅಟ್ಟಹಾಸ: ಯುವಕ-ಯುವತಿ ಮೇಲೆ ಹಲ್ಲೆ, ಇಬ್ಬರ ಬಂಧನ

ಕಳೆದ ವರ್ಷ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯುವತಿಯ ಮೈ ಮುಟ್ಟಿ ಬೆಂಗಳೂರು ಮಾನ ಹರಾಜಾಗಿದ್ದ ಪ್ರಕರಣ ಮಾಸುವ ಬೆನ್ನಲ್ಲೇ ಅಂತಹುದೇ ಮತ್ತೊಂದು ಪ್ರಕರಣ ಈ ಬಾರಿಯೂ ನಡೆದಿದೆ.

ಹೊಸ ವರ್ಷದ ಮುನ್ನಾ ದಿನ ದುಷ್ಕರ್ಮಿಗಳ ಅಟ್ಟಹಾಸ: ಯುವಕ-ಯುವತಿ ಮೇಲೆ ಹಲ್ಲೆ, ಇಬ್ಬರ ಬಂಧನ
ಹಲ್ಲೆ ಕುರಿತ ಸಿಸಿಟಿವಿ ದೃಶ್ಯಾವಳಿಯ ಚಿತ್ರ
Published On :
ಬೆಂಗಳೂರು: ಕಳೆದ ವರ್ಷ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯುವತಿಯ ಮೈ ಮುಟ್ಟಿ ಬೆಂಗಳೂರು ಮಾನ ಹರಾಜಾಗಿದ್ದ ಪ್ರಕರಣ ಮಾಸುವ ಬೆನ್ನಲ್ಲೇ ಅಂತಹುದೇ ಮತ್ತೊಂದು ಪ್ರಕರಣ ಈ ಬಾರಿಯೂ ನಡೆದಿದೆ.
ಹೊಸ ವರ್ಷಾಚರಣೆಯಲ್ಲಿ ಯುವಕರ ಗುಂಪೊಂದು ಬೈಕ್ ನಲ್ಲಿ ತೆರಳುತ್ತಿದ್ದ ಯುವಕ-ಯುವತಿಯನ್ನು ಹಿಡಿದು ಥಳಿಸಿರುವ ಘಟನೆ ಕಳೆದ ಡಿಸೆಂಬರ್ 31ರಂದು ಬೆಂಗಳೂರಿನ ಇಂದಿರಾ ನಗರದಲ್ಲಿ ನಡೆದಿದೆ. ಈ ಘಟನೆಯ  ಸಿಸಿಟಿವಿ ದೃಶ್ಯಾವಳಿಗಳು ಈಗ ವೈರಲ್ ಆಗುವ ಮೂಲಕ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆ ಮೂಲಕ ಬೆಂಗಳೂರು ಮಾನ ಮತ್ತೆ ಹರಾಜಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಇಂದಿರಾನಗರ ಪೊಲೀಸರು  ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆಗಿದ್ದೇನು?
ಪೊಲೀಸ್ ಮೂಲಗಳ ಪ್ರಕಾರ ಕಳೆದ ಡಿಸೆಂಬರ್ 31ರಂದು ಇಂದಿರಾ ನಗರದಲ್ಲಿ ತಡ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದ ಡಾರ್ಜಲಿಂಗ್ ಮೂಲದ ಅಣ್ಣ-ತಂಗಿಯ ಮೇಲೆ ಕುಡಿದ ಮತ್ತಿನಲ್ಲಿದ್ದ ಗುಂಪೊಂದು  ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಹೊಸ ವರ್ಷದಂದು ರಸ್ತೆ ಮಧ್ಯೆ 20ಕ್ಕೂ ಹೆಚ್ಚು ಮಂದಿ ಪಾನಮತ್ತರಾಗಿ ಕುಣಿಯುತ್ತಿದ್ದರು. ಈ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಅಲ್ಲಿಗೆ ಬಂದ ಅಣ್ಣ-ತಂಗಿಯ ಮೇಲೆ ಒಮ್ಮೆಲೆ ಮುಗಿಬಿದ್ದ ಗುಂಪು  ಮನಸೋಇಚ್ಛೆ ಇಬ್ಬರಿಗೂ ಥಳಿಸಿದ್ದಾರೆ. ಘಟನೆ ನಂತರ ಹೆದರಿದ ಅಣ್ಣ-ತಂಗಿ ಯಾವುದೇ ದೂರು ದಾಖಲಿಸಿರಲಿಲ್ಲ, ಆದರೆ ಈಗ ಈ ಹಲ್ಲೆಯ ವಿಡಿಯೊ ವೈರಲ್ ಆಗಿದ್ದು, ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ  ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನು ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಪೈಕಿ ಇಂದಿರಾನಗರ ವಾಸಿಗಳಾದ ಅಂಬರೀಶ್ ಮತ್ತು ಲೊಕೇಶ್ ಬಂಧಿತರಾಗಿದ್ದಾರೆ.  ಉಳಿದವರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.